ಬೀದರ್: ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.) ರೂಪಿಸಬೇಕು. 100 ಅಡಿ ದೂರದಲ್ಲಿ ನಿಂತು ಆನೆಗಳ ಸ್ನಾನ ವೀಕ್ಷಿಸಲು ಅವಕಾಶ ನೀಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶಿಸಿದ್ದಾರೆ.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಈ ಸಂಬಂಧ ಸೂಚನೆ ನೀಡಿರುವ ಅವರು, ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಆನೆಗಳ ನಡುವೆ ನಡೆದ ಕಾದಾಟದ ವೇಳೆ ಮಹಿಳೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.
.ದುಬಾರೆಯಲ್ಲಿ ಸಾಕಾನೆಗಳ ಕಾದಾಟದ ನಡುವೆ ಸಿಲುಕಿ ಮಹಿಳೆ ಸಾವು, ಪತಿ-ಮಗು ಪಾರು.
ಪರಿಸರ ಪ್ರವಾಸೋದ್ಯಮದ ಚಾರಣಪಥಗಳಲ್ಲಿ ಚಾರಣಿಗರ/ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಒ.ಪಿ.) ರೂಪಿಸಲಾಗಿದೆ. ಈ ಎಸ್.ಒ.ಪಿ. ಜಾರಿ ಖಚಿತಪಡಿಸಿಕೊಳ್ಳುವವರೆಗೆ ಚಾರಣಪಥಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ಪ್ರಕಾರವಾಗಿ ಸಾಕಾನೆ ಶಿಬಿರಗಳಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಎಸ್.ಒ.ಪಿ. ರೂಪಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿರುವ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಮೇ 19ರಿಂದಲೇ ಪ್ರವಾಸಿಗರು ಆನೆ ಬಳಿ ಹೋಗದಂತೆ, ಕನಿಷ್ಠ 100 ಅಡಿ ದೂರದಲ್ಲಿ ನಿಂತು ಆನೆ ಮೈತೊಳೆಯುವುದನ್ನು ವೀಕ್ಷಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಆನೆಗಳ ಬಳಿ ಹೋಗಿ ಸೆಲ್ಫಿ, ಫೋಟೋ ತೆಗೆಸಿಕೊಳ್ಳಲು, ಮೈತೊಳೆಯಲು ಅವಕಾಶ ನೀಡದಂತೆ ಮತ್ತು ಬಾಳೆಹಣ್ಣು, ಬೆಲ್ಲ, ಕಬ್ಬು ಇತ್ಯಾದಿ ಯಾವುದೇ ಆಹಾರವನ್ನು ಪ್ರವಾಸಿಗರ ಕೈಯಿಂದ ತಿನ್ನಸದಂತೆ ಆದೇಶ ಹೊರಡಿಸಲೂ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.