ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ₹ 5 ಲಕ್ಷ ದಂಡ!

ಸ್ನಾತಕೋತ್ತರ ಪದವಿಯ ಸೀಟ್ ಅನ್ನು ಬ್ಲಾಕ್ ಮಾಡುವ ಮೂಲಕ ಕಾನೂನು ಬಾಹಿರವಾಗಿ ಸೀಟು ಹಂಚಿಕೆ
Published 21 ಜನವರಿ 2024, 0:39 IST
Last Updated 21 ಜನವರಿ 2024, 0:39 IST
ಅಕ್ಷರ ಗಾತ್ರ

ಬೆಂಗಳೂರು: ರೇಡಿಯೊ ಡಯೋಗ್ನಾಸಿಸ್ ವೈದ್ಯಕೀಯ ಸ್ನಾತಕೋತ್ತರ ಪದವಿಯ ಸೀಟ್ ಅನ್ನು ಬ್ಲಾಕ್ ಮಾಡುವ ಮೂಲಕ ಕಾನೂನು ಬಾಹಿರವಾಗಿ ಸೀಟು ಹಂಚಿಕೆ ಮಾಡಿದ ಆರೋಪದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಹೈಕೋರ್ಟ್ ₹ 5 ಲಕ್ಷ ದಂಡ ವಿಧಿಸಿದೆ.

ಈ ಸಂಬಂಧ ಸೀಟು ವಂಚಿತರಾದ ಹಾಸನ ಜಿಲ್ಲೆ ಚನ್ನರಾಯಪಟ್ಟಣದ
ಡಾ.ಸಿ.ಕೆ.ರಜನಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರಿಗೆ ರೇಡಿಯೊ ಡಯೋಗ್ನಾಸಿಸ್​ ಸೀಟನ್ನು ಮರು ಹಂಚಿಕೆ ಮಾಡಬೇಕು’ ಎಂದೂ ನಿರ್ದೇಶಿಸಿದೆ.

‘ದಂಡದ ಮೊತ್ತದಲ್ಲಿ ₹ 2.5 ಲಕ್ಷ ಮೊತ್ತವನ್ನು ಡಾ.ಸಿ.ಕೆ.ರಜನಿ ಅವರಿಗೆ ಪಾವತಿಸಬೇಕು. ಉಳಿದ ₹ 2.5 ಲಕ್ಷ ಮೊತ್ತವನ್ನು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಹೆಸರಿನಲ್ಲಿ ಠೇವಣಿ ಇರಿಸಬೇಕು’ ಎಂದು ಆದೇಶದಲ್ಲಿ ವಿವರಿಸಲಾಗಿದೆ.

‘ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರಕ್ಕೆ ಅರ್ಜಿದಾರರು ಪಾವತಿಸಿರುವ ಶುಲ್ಕವನ್ನು ಕಲಬುರಗಿಯ ಎಂ.ಆರ್.ವೈದ್ಯಕೀಯ ಕಾಲೇಜಿನ ರೇಡಿಯೊ ಡಯೋಗ್ನಾಸಿಸ್ ಸೀಟಿಗೆ ಸರಿ ಹೊಂದಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.

‘2023ರ ಸೆಪ್ಟೆಂಬರ್ 19ರಲ್ಲಿ ನಡೆದ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ನನಗೆ ಅನ್ಯಾಯವಾಗಿದೆ’ ಎಂದು ಆಕ್ಷೇಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT