ಬೆಂಗಳೂರು: ‘ಸ್ನಾತಕೋತ್ತರ (ಪಿಜಿ) ಆಯುಷ್ ಕೋರ್ಸ್ ಪ್ರವೇಶಕ್ಕೆ ಕನಿಷ್ಠ ಅರ್ಹತೆಯ ಅಂಕಗಳನ್ನು ಪರಿಷ್ಕರಿಸಿರುವ ಕಾರಣ ಆನ್ಲೈನ್ನಲ್ಲಿ ನೋಂದಣಿ, ಅರ್ಜಿ ಸಲ್ಲಿಕೆಗೆ ಪೋರ್ಟಲ್ ತೆರೆಯಲಾಗಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಭಾರತೀಯ ವೈದ್ಯ ಪದ್ಧತಿಯ ರಾಷ್ಟ್ರೀಯ ಆಯೋಗ ಪ್ರಸಕ್ತ ಸಾಲಿಗೆ ಪಿಜಿ ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ 15 ಪರ್ಸೆಂಟೈಲ್ ಕಡಿಮೆ ಮಾಡಿರುವ ಕಾರಣ, ಅರ್ಹರಾಗುವ ಎಲ್ಲರಿಗೂ ಅನುಕೂಲ ಮಾಡಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಡಿ. 1ರವರೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು. ದಾಖಲೆಗಳ ಪರಿಶೀಲನೆ ಡಿ. 2ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳ ಸಹಿತ ಬರಬೇಕು ಎಂದು ಅವರು ಹೇಳಿದ್ದಾರೆ.

‘ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ ದಾಖಲಿಸಲು ಡಿ. 3ರವರೆಗೆ ಅವಕಾಶ ನೀಡಲಾಗಿದೆ. ಅದೇ ದಿನ ಸಂಜೆ 7 ಗಂಟೆಗೆ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಡಿ.4ರಂದು ಬೆಳಿಗ್ಗೆ 11ಕ್ಕೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ಚಲನ್ ಡೌನ್ಲೋಡ್ ಮಾಡಿಕೊಂಡು 6ರೊಳಗೆ ಶುಲ್ಕ ಪಾವತಿಸಬೇಕು. ಕಾಲೇಜುಗಳಿಗೆ ವರದಿ ಮಾಡಿಕೊಳ್ಳಲು ಡಿ.7 ಕೊನೆ ದಿನ’ ಎಂದಿದ್ದಾರೆ.

ದಿನಾಂಕ ವಿಸ್ತರಣೆ: ಎಂಬಿಎ, ಎಂಸಿಎ, ಎಂ.ಟೆಕ್ ಕೋರ್ಸ್ಗಳ ಪ್ರವೇಶಕ್ಕೆ ನಡೆಯುವ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ನ. 30ರ ಮಧ್ಯಾಹ್ನ 12 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ. 2 ಕೊನೆ ದಿನ: ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ನ ಸ್ನಾತಕೋತ್ತರ ಕೋರ್ಸ್ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಶುಕ್ರವಾರದಿಂದ (ನ. 29) ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 2ರೊಳಗೆ ಅರ್ಜಿ ಸಲ್ಲಿಸಬೇಕು. ರಾಜ್ಯದ ಅಭ್ಯರ್ಥಿಗಳು ಆಯಾಯ ಪದವಿ ಕೋರ್ಸ್ಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, 2024-25ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದೂ ಎಚ್. ಪ್ರಸನ್ನ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.