ನವದೆಹಲಿ: ದೇಶದಲ್ಲಿ 2024ರಲ್ಲಿ ರೈತರು ಹಾಗೂ ಕೃಷಿ ಕಾರ್ಮಿಕರ ಆತ್ಮಹತ್ಯೆಗಳು ಸ್ವಲ್ಪ ಕಡಿಮೆಯಾಗಿವೆ. ಆದರೆ, ಕರ್ನಾಟಕದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 22.61ರಷ್ಟು ಹೆಚ್ಚಳ ಆಗಿದೆ ಎಂದು ‘ಭಾರತದಲ್ಲಿ ಅಪಘಾತದ ಸಾವುಗಳು ಹಾಗೂ ಆತ್ಮಹತ್ಯೆಗಳು–2024’ ವರದಿ ತಿಳಿಸಿದೆ.

ಬುಧವಾರ ಪ್ರಕಟವಾದ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (ಎನ್ಸಿಆರ್ಬಿ) ವರದಿ ಪ್ರಕಾರ, ದೇಶದಲ್ಲಿ ಕೃಷಿ ಕ್ಷೇತ್ರದಲ್ಲಿ ತೊಡಗಿರುವ 10,546 ಮಂದಿ 2024ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ ಈ ಸಂಖ್ಯೆ 10,786 ಆಗಿತ್ತು. ದೇಶದಲ್ಲಿ ಆತ್ಮಹತ್ಯೆ ಪ್ರಮಾಣ ಶೇ 2.22ರಷ್ಟು ಕಡಿಮೆ ಆಗಿದೆ. ಆದರೆ, ಕರ್ನಾಟಕದಲ್ಲಿ ಈ ಸಂಖ್ಯೆ 2,423ರಿಂದ 2,971ಕ್ಕೆ ಏರಿಕೆ ಆಗಿದೆ.

ರೈತರ ಆತ್ಮಹತ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಅನ್ನದಾತರ ಆತ್ಮಹತ್ಯೆಯಲ್ಲಿ ಮೊದಲ ಐದು ಸ್ಥಾನದಲ್ಲಿರುವ ರಾಜ್ಯಗಳ ಪೈಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ 2024ರಲ್ಲಿ ಈ ಸಂಖ್ಯೆ ಜಾಸ್ತಿ ಆಗಿದೆ. ರಾಜ್ಯದಲ್ಲಿ 2023ರಲ್ಲಿ 1,425 ಕೃಷಿಕರು ಆತ್ಮಹತ್ಯೆ ಮಾಡಿಕೊಂಡಿದ್ದರು. 2024ರಲ್ಲಿ 1,770 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 1,201 ಕೃಷಿ ಕಾರ್ಮಿಕರು ಜೀವ ಕಳೆದುಕೊಂಡಿದ್ದಾರೆ.

ಮಹಾರಾಷ್ಟ್ರ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ಆತ್ಮಹತ್ಯೆ ಪ್ರಮಾಣ ಅಲ್ಪ ಇಳಿಕೆ ಆಗಿದ್ದರೆ, ಛತ್ತೀಸಗಢ, ಗುಜರಾತ್, ರಾಜಸ್ಥಾನ ಹಾಗೂ ಪುದುಚೆರಿಯಲ್ಲಿ ಸ್ವಲ್ಪ ಏರಿಕೆ ಆಗಿದೆ. ರೈತರ ಆತ್ಮಹತ್ಯೆಗೆ ಕಾರಣಗಳನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ.

ಆತ್ಮಹತ್ಯೆ ಮಾಡಿಕೊಂಡ 4,633 ರೈತರಲ್ಲಿ 4,134 ಜನರು ತಮ್ಮ ಸ್ವಂತ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದರೆ, 499 ಜನರು ಗುತ್ತಿಗೆಗೆ ಭೂಮಿಯನ್ನು ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.