ಬೆಂಗಳೂರು: ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡಿರುವ ಕಾರಣದಿಂದಾಗಿಯೇ ರಾಜ್ಯಕ್ಕೆ ಅತಿ ಹೆಚ್ಚು ಪ್ರಮಾಣದಲ್ಲಿ ವಿದೇಶ ನೇರ ಹೂಡಿಕೆ ಹರಿದು ಬರುತ್ತಿದೆ ಎಂದು ಕಾಂಗ್ರೆಸ್ನ ಬಸವರಾಜ ರಾಯರಡ್ಡಿ ಹೇಳಿದರು.

ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದಲ್ಲಿ ವಿದೇಶಿ ನೇರ ಹೂಡಿಕೆಯಲ್ಲಿ ಮಹಾರಾಷ್ಟ್ರ ನಂಬರ್ 1 ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಸಿದ್ದರಾಮಯ್ಯ ಅವರೇ ಕಾರಣರು’ ಎಂದರು.

ಗ್ಯಾರಂಟಿ ಯೋಜನೆಗಳ ಕಾರಣ ರಾಜ್ಯದ ತಲಾ ಆದಾಯವೂ ಹೆಚ್ಚಾಗಿದೆ. ತಲಾವಾರು ಆದಾಯದಲ್ಲಿ ದೇಶದಲ್ಲೇ ಎಲ್ಲಾ ರಾಜ್ಯಗಳಿಗಿಂತಲೂ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಮಹಾರಾಷ್ಟ್ರ 3 ನೇ ಸ್ಥಾನದಲ್ಲಿ, ಗುಜರಾತ್ 4 ನೇ ಸ್ಥಾನದಲ್ಲಿದೆ. ಈ ಮಾಹಿತಿಯನ್ನು ಕೇಂದ್ರ ಹಣಕಾಸು ಸಚಿವೆ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ ಎಂದರು.

‘ಕೇಂದ್ರ ಸರ್ಕಾರದ ತಾರತಮ್ಯದ ಧೋರಣೆಯಿಂದಾಗಿ ನಮ್ಮ ರಾಜ್ಯಕ್ಕೆ ಆರ್ಥಿಕವಾಗಿ ಅನ್ಯಾಯ ಆಗುತ್ತಿದೆಯೇ ಹೊರತು, ರಾಜ್ಯ ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಅಲ್ಲ’ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ತಾವು ಮಂಡಿಸಿರುವ ಎಲ್ಲಾ ಆಯವ್ಯಯದಲ್ಲೂ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಬಂದಿದ್ದಾರೆ. ಒಮ್ಮೆಯೂ ಅವರು ಆರ್ಥಿಕ ಶಿಸ್ತನ್ನು ಬಿಟ್ಟು ಹೋಗಿಲ್ಲ. ಆದರೆ, ಯಾವುದೇ ತುರ್ತುಸ್ಥಿತಿ ಇಲ್ಲದಿದ್ದರೂ ಸಕಾರಣವಿಲ್ಲದೆ 2008–09 ರಲ್ಲಿ ಬಿ.ಎಸ್.ಯಡಿಯೂರಪ್ಪ ಆರ್ಥಿಕ ಶಿಸ್ತು ಇಲ್ಲದ ಬಜೆಟ್ ಮಂಡಿಸಿದ್ದರು. ಅದೇ ರೀತಿ ಬಸವರಾಜ ಬೊಮ್ಮಾಯಿ ಅವರು ಕೋವಿಡ್ ಇದ್ದ ಕಾರಣ ಆರ್ಥಿಕ ಶಿಸ್ತು ಇಲ್ಲದ ಬಜೆಟ್ ಮಂಡಿಸಿದ್ದರು ಎಂದು ರಾಯರಡ್ಡಿ ಹೇಳಿದರು.

‘ರೈತರನ್ನು ಮದುವೆ ಆಗುವವರಿಗೆ ವಿಶೇಷ ಭತ್ಯೆ ಕೊಡಿ’

‘ಗ್ರಾಮಾಂತರ ಪ್ರದೇಶದಲ್ಲಿ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಅಲ್ಲಿನ ಯುವಕರನ್ನು ನೋಡಿದರೆ ಹೊಟ್ಟೆ ಉರಿಯುತ್ತದೆ’ ಎಂದು ಕಾಂಗ್ರೆಸ್ನ ಎಚ್.ಡಿ.ರಂಗನಾಥ್ ಹೇಳಿದರು. ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ರೈತರ ಮಕ್ಕಳನ್ನು ಮದುವೆ ಆಗುವ ಯುವತಿಯರಿಗೆ ಅಂದರೆ ಸೊಸೆಯಂದಿರಿಗೆ ವಿಶೇಷ ಭತ್ಯೆಯನ್ನು ಸರ್ಕಾರ ನೀಡಬೇಕು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.