ಬೆಂಗಳೂರು: ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು, ನೆರೆ ಸಂತ್ರಸ್ತರಿಗೆ ಬಟ್ಟೆ ಮತ್ತಿತರ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ₹195 ಕೋಟಿ ಅನುದಾನವನ್ನು ಸೋಮವಾರ ಬಿಡುಗಡೆ ಮಾಡಿದೆ.
ಸಂತ್ರಸ್ತರು ದಿನ ಬಳಕೆಯ ವಸ್ತುಗಳನ್ನು ಕೊಳ್ಳಲು ಪ್ರತಿ ಕುಟುಂಬಕ್ಕೆ ₹10 ಸಾವಿರ ನೀಡಲಾಗುತ್ತಿದೆ. ಅದಕ್ಕಾಗಿ ಈ ಹಣ ಬಳಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ರಾಜ್ಯ ವಿಪತ್ತು ನಿರ್ವಹಣಾ ನಿಧಿಯಲ್ಲಿ ಹೆಚ್ಚುವರಿಯಾಗಿ ₹ 80 ಕೋಟಿ ಸೇರಿದಂತೆ ₹ 195 ಕೋಟಿ ಮಂಜೂರು ಮಾಡಲಾಗಿದೆ.
ಉತ್ತರ ಕರ್ನಾಟಕ ಭಾಗದ ಸುಮಾರು 18 ಜಿಲ್ಲೆಗಳಲ್ಲಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಸಾವಿರಾರು ಜನರು ಸಂತ್ರಸ್ತರಾಗಿದ್ದಾರೆ.