ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿ ಅವಲೋಕನಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲೆಯತ್ತ ಹೊರಟಿದ್ದಾರೆ.

ತಮ್ಮ ನಿವಾಸದಿಂದ ಹೊರಟಿರುವ ಮುಖ್ಯಮಂತ್ರಿಯವರು, ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ತೆರಳುತ್ತಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರು ಯಡಿಯೂರಪ್ಪ ಅವರ ಜತೆಗಿದ್ದಾರೆ.

ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಪ್ರವಾಹದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಖುದ್ದಾಗಿ ಭೇಟಿನೀಡಲಿರುವ ಮುಖ್ಯಮಂತ್ರಿ, ಮಧ್ಯಾಹ್ನದ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳ ಜತೆ ಸಭೆ ನಡೆಸುವರು. ಸಂಜೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗುವರು.

ಓದಿ:ಬಿಎಸ್ವೈ ನಿಗೂಢ ನಡೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.