ಬೆಂಗಳೂರು: ಶುಕ್ರವಾರ ಮಧ್ಯಾಹ್ನ 1.20ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರ ವಿರುದ್ಧ ಜೆಡಿಎಸ್–ಕಾಂಗ್ರೆಸ್ ಶಾಸಕರು ಕಿಡಿ ಕಾರಿದರು.

ವಿಧಾನಸಭೆಯಲ್ಲಿ ಶುಕ್ರವಾರ ಮೈತ್ರಿ ಸದಸ್ಯರು, ‘ರಾಜ್ಯಪಾಲರು ಬಿಜೆಪಿ ಪಕ್ಷಪಾತಿಯಂತೆ ವರ್ತಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಗೋ ಬ್ಯಾಕ್ ಗವರ್ನರ್’ ಎಂದೂ ಘೋಷಣೆ ಕೂಗಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಳಿಸುವಂತೆ ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಅವರು ಹೀಗೆ ಸೂಚನೆ ನೀಡಬಹುದೇ. ಸಭಾಧ್ಯಕ್ಷರು ಮಾರ್ಗದರ್ಶನ ನೀಡಬೇಕು’ ಎಂದು ಕೋರಿದರು.

‘ಸಭಾನಾಯಕರೇ ವಿಶ್ವಾಸಮತದ ಪ್ರಸ್ತಾವ ಮಂಡಿಸಿದ್ದಾರೆ. ಹೀಗಾಗಿ, ಈ ನಿರ್ಣಯ ಸದನದ ಸ್ವತ್ತು. ಸದಸ್ಯರ ಹಕ್ಕು ಮೊಟಕು ಮಾಡುವುದು ಸರಿಯೇ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು.

ರಾಜ್ಯಪಾಲರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಅರುಣಾಚಲ ಪ್ರದೇಶದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಉಲ್ಲೇಖಿಸಿದರು.

‘ರಾಜ್ಯಪಾಲರು ಕಾನೂನು ಚೌಕಟ್ಟು ಮೀರಿ ವರ್ತಿಸಬಾರದು. ನಿಮ್ಮ ಅಧಿಕಾರದ ಹಪಾಹಪಿಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಆಗುತ್ತಿದೆ’ ಎಂದು ಆರೋಪಿಸಿದರು.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ‘ವಿಶ್ವಾಸಮತ ಮಂಡನೆಯ ಪ್ರಸ್ತಾವವನ್ನು ಮುಖ್ಯಮಂತ್ರಿ ಅವರೇ ಮಂಡಿಸಿದ್ದು, ಚರ್ಚೆ ನಡೆಯುತ್ತಿದೆ. ಈ ವೇಳೆ ಗಡುವು ನೀಡಲು ರಾಜ್ಯಪಾಲರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ರೀ ರೀತಿ ಹೇಳಿರುವುದು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ’ ಎಂದರು.

ಇನ್ನಷ್ಟು...

‘ಅಧಿಕಾರ’ಕ್ಕಾಗಿ ನಿಲ್ಲದ ಹಗ್ಗಜಗ್ಗಾಟ: ರಾಜ್ಯಪಾಲರಿಗೆ ‘ದೋಸ್ತಿ’ ಸಡ್ಡು

ಶಾಸಕರಿಗೆ ಕೋಟಿ ಕೋಟಿ ಆಮಿಷ: ಬಿಜೆಪಿ ವಿರುದ್ಧ ಕಾಂಗ್ರೆಸ್–ಜೆಡಿಎಸ್ ಆರೋಪ

ಬಿಜೆಪಿ ಮೇಲಿನ ದಾಳಿಗೆ ಮಾಧುಸ್ವಾಮಿ ‘ತಡೆಗೋಡೆ’

ದರಿದ್ರ, ಹೊಲಸು ಎಲ್ಲವೂ ಹೊರಗೆ ಬರಲಿ: ಸಭಾಧ್ಯಕ್ಷರ ಆಕ್ರೋಶ

ಉಲ್ಟಾ ಹೊಡೆದ ‘ಗುಳ್ಳೆ ನರಿ ಶಾಸ್ತ್ರ’

ಸುಪ್ರೀಂ ಕೋರ್ಟ್ ನೆರವಿನ ನಿರೀಕ್ಷೆಯಲ್ಲಿ ‘ದೋಸ್ತಿ’ಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.