ಬೆಂಗಳೂರು: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಭಾನುವಾರ (ಸೆ. 15) ಬೀದರ್‌ನ ಬಸವ ಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೂ 25 ಲಕ್ಷ ಜನ ಒಳಗೊಳ್ಳುವ 2,500 ಕಿ.ಮೀ ಉದ್ದದ ಮಾನವ ಸರಪಳಿ ರಚಿಸುತ್ತಿದೆ.

ಇದೊಂದು ವಿನೂತನ ಪ್ರಯೋಗವಾಗಿದ್ದು, ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಒಟ್ಟಾಗಿ 2,500 ಕಿ.ಮೀ ಉದ್ದದವರೆಗೂ ಕೈಕೈ ಹಿಡಿದು ನಿಲ್ಲಲಿದ್ದಾರೆ. ಇದು ವಿಶ್ವದಾಖಲೆಯಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಅಸ್ಪೃಶ್ಯತೆ ನಿವಾರಣೆ ಮಾಡಿ, ಭ್ರಾತೃತ್ವ ಬೆಳೆಸಲು ಎಲ್ಲರೂ ಒಂದಾಗಿ ಸಮಾನತೆಯ ಹೆಜ್ಜೆ ಹಾಕುತ್ತಿದ್ದಾರೆ. ಈ ಸಮಯದಲ್ಲಿ ಸಂವಿಧಾನದ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಮಾತುಗಳು ಪ್ರತಿಧ್ವನಿಸಲಿವೆ. ಮಾನವ ಸರಪಳಿ ನಿರ್ಮಿಸುವ ರಸ್ತೆಯ ಉದ್ದಕ್ಕೂ ಗಿಡಗಳನ್ನೂ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ವಿವಿಧ ಬಗೆಯ 10 ಲಕ್ಷ ಸಸಿಗಳನ್ನು ಸಿದ್ಧಪಡಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಆಯೋಜಿಸಿರುವ ಸರಪಳಿಯ ಸಂಯೋಜನೆಗೆ 32 ಇಲಾಖೆಗಳ ಸುಮಾರು ಎಂಟು ಲಕ್ಷಕ್ಕೂ ಅಧಿಕ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಮಾನವ ಸರಪಳಿಯ ಸಂಪೂರ್ಣ ವೀಕ್ಷಣೆಗೆ ಸರ್ಕಾರ ವಿಶ್ವ ಸುಧಾರಿತ ತಂತ್ರಜ್ಞಾನ ಬಳಸುತ್ತಿದೆ. ಲಂಡನ್‌ನ ವಿಶ್ವ ದಾಖಲೆ ಪರಿಶೀಲಿಸುವ ತಂಡದ ಸದಸ್ಯರು ಉಪಸ್ಥಿತರಿದ್ದು, ವೀಕ್ಷಿಸಲಿದ್ದಾರೆ.

ಈ ವಿಶೇಷ ಮಾನವ ಸರಪಳಿ ಪ್ರತಿ ಜಿಲ್ಲೆ, ತಾಲ್ಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳನ್ನು ಒಳಗೊಂಡಿರುತ್ತದೆ. ಭಾಗವಹಿಸುವ ಮಕ್ಕಳು, ಜನರಿಗೆ ನೀರು, ಹಾಲು, ಉಪಾಹಾರದ ವ್ಯವಸ್ಥೆ ಮಾಡಲಾಗಿದೆ. ಆಯಾ ಠಾಣಾ ವ್ಯಾಪ್ತಿಯ ಪೊಲೀಸರಿಗೆ ಸಂಚಾರ ನಿರ್ವಹಣೆಯ ಹೊಣೆಗಾರಿಕೆ ನೀಡಲಾಗಿದೆ. ಸ್ಥಳೀಯರು ಸಹ ಎಲ್ಲೆಡೆ ಹಬ್ಬದಂತೆ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ.

ಬೆಳಿಗ್ಗೆ 9ಕ್ಕೆ ಸಿ.ಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗ ಬೆಳಿಗ್ಗೆ 9ಕ್ಕೆ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಆಯಾ ಜಿಲ್ಲೆಗಳ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡದ ಜನರು ಸಮುದ್ರದಲ್ಲೇ ನಿಂತು ಮಾನವ ಸರಪಳಿ ರಚಿಸಲಿದ್ದಾರೆ. ಮಂಗಳೂರಿನ ಹರೇಕಳ ಹಾಜಬ್ಬ ಅವರನ್ನು ರಾಯಭಾರಿಯನ್ನಾಗಿ ನೇಮಿಸಲಾಗಿದೆ.

ವೇಷ, ಭೂಷಣ ಹಾಗೂ ವಿಶೇಷ ಸಂದೇಶ ಸಾರುವ ವಿಭಿನ್ನ ಪ್ರಯತ್ನ ಮಾಡಿದ ಜಿಲ್ಲೆಗಳಿಗೆ ಐದು ವಿಭಾಗಗಳಲ್ಲಿ ತಲಾ ಮೂರು ಪ್ರಶಸ್ತಿ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ತಿಳಿಸಿದ್ದಾರೆ.

ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುತ್ತಾ ಜಾಗೃತಿ ಮೂಡಿಸಲು ವಿಶ್ವಮಟ್ಟದ ಕಾರ್ಯಕ್ರಮ ರೂಪಿಸಲಾಗಿದೆ. ಸಮಸ್ತ ಜನರೂ ಭಾಗಿಯಾಗುವ ಮೂಲಕ ಮೂಲಕ ಪ್ರಜಾಪ್ರಭುತ್ವ ಉಳಿಸಿ, ಬೆಳೆಸಲಿದ್ದಾರೆ.
–ಎಚ್.ಸಿ. ಮಹಾದೇವಪ್ಪ, ಸಮಾಜ ಕಲ್ಯಾಣ ಸಚಿವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.