ನವದೆಹಲಿ: ‘ತಂತ್ರಜ್ಞಾನದ ಜೊತೆಗೆ ವ್ಯಾಪಾರ, ಆವಿಷ್ಕಾರ, ಜನರ ಸಹಯೋಗ ಹಾಗೂ ವಿಶ್ವದೊಂದಿಗಿನ ಪಾಲುದಾರಿಕೆಗೆ ಕರ್ನಾಟಕ ಆಸಕ್ತಿ ಹೊಂದಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯಲ್ಲಿ ಶುಕ್ರವಾರ ನಡೆದ ‘ಬ್ರಿಡ್ಜ್ ಟು ಬೆಂಗಳೂರು’: ವಿವಿಧ ದೇಶಗಳ ರಾಯಭಾರಿಗಳು ಹಾಗೂ ರಾಜತಾಂತ್ರಿಕರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕರ್ನಾಟಕವು ಜಾಗತಿಕ ಆವಿಷ್ಕಾರ ಕೇಂದ್ರ ಮತ್ತು ಹೂಡಿಕೆಯ ಆದ್ಯತಾ ತಾಣವಾಗಿರುವುದನ್ನು ಪ್ರಸ್ತಾಪಿಸಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ‘ಬೆಂಗಳೂರು ಕೇವಲ ಭೇಟಿ ನೀಡುವ ನಗರವಲ್ಲ. ಕನಸುಗಳನ್ನು ಕಟ್ಟಿಕೊಳ್ಳುವ, ಭವಿಷ್ಯ ರೂಪಿಸುವ ನಗರವಾಗಿದೆ. ಎಲ್ಲರನ್ನೂ, ಎಲ್ಲದನ್ನೂ ಸ್ವಾಗತಿಸುವ ಅದರ ಮುಕ್ತ ಧೋರಣೆ, ಸದೃಢ ಪರಿಸರ ವ್ಯವಸ್ಥೆ ಮತ್ತು ಉತ್ತಮ ಜೀವನಮಟ್ಟದಿಂದ ಜಾಗತಿಕ ಪ್ರತಿಭೆ, ಆವಿಷ್ಕಾರ ಹಾಗೂ ಹೂಡಿಕೆಗಳನ್ನು ನಿರಂತರವಾಗಿ ಸೆಳೆಯುತ್ತಾ, ಅವಕಾಶಗಳ ನಗರವಾಗಿ ಮುಂದುವರಿಯುತ್ತಿದೆ’ ಎಂದರು.

ಆವಿಷ್ಕಾರ ಕ್ಷೇತ್ರದಲ್ಲಿನ ಬೆಳವಣಿಗೆ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆ ಕುರಿತು ಮಾತನಾಡಿದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ‘ಕರ್ನಾಟಕವು ಬಂಡವಾಳ ಹೂಡಿಕೆಗಷ್ಟೇ ಸೀಮಿತವಾದ ‘ಸುಪ್ತ ಪಾಲುದಾರಿಕೆ’ಯಲ್ಲಿ ಆಸಕ್ತಿ ಹೊಂದಿರದೆ, ದೀರ್ಘಾವಧಿಯ, ನಿರ್ದಿಷ್ಟ ಫಲಿತಾಂಶ ಆಧಾರಿತ ನಾವೀನ್ಯದ ಸಹಯೋಗಗಳನ್ನು ಕಾರ್ಯಗತಗೊಳಿಸಲು ನೆರವಾಗುವ ಪಾಲುದಾರರ ಹುಡುಕಾಟದಲ್ಲಿ ಇದೆ‘ ಎಂದರು.

‘ಕರ್ನಾಟಕವು ತಂತ್ರಜ್ಞಾನ ಕೇಂದ್ರದಿಂದ ಜಾಗತಿಕ ನಾವೀನ್ಯತೆಯ ಪ್ರಮುಖ ಪಾಲುದಾರ ತಾಣವಾಗಿ ಅಭಿವೃದ್ಧಿಗೊಂಡಿದ್ದು, ನೀತಿ- ನಿರೂಪಣೆಯ ನೆರವು, ನವೋದ್ಯಮಗಳನ್ನು ಜಾಗತಿಕ ಮಟ್ಟಕ್ಕೆ ಬೆಳೆಸಲು ಅಗತ್ಯ ಬೆಂಬಲ, ಸಂಶೋಧನಾ ಸಹಯೋಗ ಮತ್ತು ಮಾರುಕಟ್ಟೆ ಲಭ್ಯತೆ ಅವಕಾಶಗಳನ್ನು ಒದಗಿಸಿದೆ. ಈ ಮೂಲಕ, ಹೂಡಿಕೆದಾರರು ಮತ್ತು ಉದ್ಯಮಿಗಳಿಗೆ ಆಕರ್ಷಕ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ವಿವಿಧ ದೇಶಗಳ ರಾಜತಾಂತ್ರಿಕರು ಬಣ್ಣಿಸಿದರು.

ಸಂವಾದ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ ಪಾಟೀಲ ಮತ್ತು ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. 45 ರಾಯಭಾರಿಗಳು ಮತ್ತು ಹೈಕಮಿಷನರ್ಗಳು ಸೇರಿದಂತೆ 80ಕ್ಕೂ ಹೆಚ್ಚು ದೇಶಗಳ ಹಿರಿಯ ರಾಜತಾಂತ್ರಿಕ ಪ್ರತಿನಿಧಿಗಳು ಅನಿಸಿಕೆಗಳನ್ನು ಹಂಚಿಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-4-209320452

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.