ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಉಚಿತ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

Published 5 ಜೂನ್ 2023, 11:53 IST
Last Updated 5 ಜೂನ್ 2023, 11:53 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸೋಮವಾರ ಮಾರ್ಗಸೂಚಿ ಪ್ರಕಟಿಸಿದೆ.

ಈ ಸವಲತ್ತು ಪಡೆಯಲು ಸ್ಮಾರ್ಟ್‌ ಕಾರ್ಡ್‌ ಕಡ್ಡಾಯ ಎಂದು ಸರ್ಕಾರ ತಿಳಿಸಿದೆ. ಸೇವಾ ಸಿಂಧು ಮೂಲಕ ಅರ್ಜಿ ಪಡೆದು, ಮುಂದಿನ ಮೂರು ತಿಂಗಳ ಒಳಗಾಗಿ ಕಾರ್ಡ್‌ ವಿತರಣೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಸರ್ಕಾರವು ಸಾರಿಗೆ ಇಲಾಖೆ ಸೂಚಿಸಿದೆ.

ಸ್ಮಾರ್ಟ್‌ ಕಾರ್ಡ್‌ ಸಿಗುವವರೆಗೆ, ಕೇಂದ್ರ, ರಾಜ್ಯ ಸರ್ಕಾರ ಅಥವಾ ಸರ್ಕಾರಿ ಸ್ವಾಮ್ಯದ ಕಚೇರಿಗಳು ವಿತರಿಸಿರುವ ಭಾವಚಿತ್ರ, ವಿಳಾಸವುಳ್ಳ ಗುರುತಿನ ಚೀಟಿ ಗಳನ್ನು ಶೂನ್ಯ ಟಿಕೆಟ್‌ಗೆ ಪರಿಗಣಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಯಾವ ಬಸ್‌ಗಳಲ್ಲಿ ಉಚಿತ ಪ್ರಯಾಣ ಇಲ್ಲ?

ರಾಜ್ಯದ ಒಳಗೆ ಸಂಚರಿಸುವ ಐಷಾರಾಮಿ ಬಸ್‌ಗಳಾದ ರಾಜಹಂಸ, ನಾನ್‌ ಎಸಿ ಸ್ಲೀಪರ್‌, ವಜ್ರ, ವಾಯುವಜ್ರ, ಐರಾವತ, ಐರಾವತ ಕ್ಲಬ್‌ ಕ್ಲಾಸ್‌, ಐರಾವತ ಗೋಲ್ಡ್‌ ಕ್ಲಾಸ್‌, ಅಂಬಾರಿ, ಅಂಬಾರಿ ಡ್ರೀಮ್‌ ಕ್ಲಾಸ್‌, ಅಂಬಾರಿ ಉತ್ಸವ್‌, ಫ್ಲೈ ಬಸ್‌, ಇ.ವಿ ಪವರ್‌ ಪ್ಲಸ್‌ ಇವುಗಳಲ್ಲಿ ಉಚಿತ ಪ್ರಯಾಣ ಇಲ್ಲ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ (ಅಂತರರಾಜ್ಯ ಎ.ಸಿ. ಮತ್ತು ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ) ಶೇ 50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದರಿಸಿಬೇಕು ಎಂದು ಆದೇಶದಲ್ಲಿ ಹೇಳಲಾಗಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT