ಬೆಂಗಳೂರು: ಕೋವಿಡ್ -19 ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆಸೂಚಿಸಿದೆ.

ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಿರಿಯ ವೈದ್ಯ ಡಾ.ಗಿರಿಧರ ಕಜೆ ಅವರನ್ನು ತಮ್ಮ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಈ ವಿಷಯ ತಿಳಿಸಿದರು.

‘ಆರಂಭದಲ್ಲಿ ಹತ್ತು ಮಂದಿ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲೇ ಆಯುರ್ವೇದ ಗುಳಿಗೆ ನೀಡಲಾಗುವುದು, ಅದರ ಫಲಿತಾಂಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ಎಂದು ಗಿರಿಧರ ಕಜೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರದಿಂದ ಅಧಿಕೃತ ಆದೇಶ ಬಂದ ತಕ್ಷಣ ಈ ಔಷಧ ಪ್ರಯೋಗ ಆರಂಭವಾಗಲಿದೆ. ಬಹುಶಃ ಎರಡು, ಮೂರು ದಿನಗಳಲ್ಲಿ ಇದು ಆರಂಭವಾಗಬಹುದು, ಏನಿದ್ದರೂ ಸರ್ಕಾರ ಏನು ಸೂಚಿಸುತ್ತದೆಯೋ ಅದರಂತೆ ನಡೆಯಲಾಗುವುದು ಎಂದುಹೇಳಿದರು.

‘ನಾನು ಪ್ರಚಾರಕ್ಕಾಗಿ ಈ ಕೆಲಸ ಮಾಡಿಲ್ಲ, ಆಯುಷ್ ಇಲಾಖೆಯಿಂದ ನನಗೆ ನೋಟಿಸ್ ಬಂದಿಲ್ಲ, ರಾಜ್ಯ ಸರ್ಕಾರದ ಮೂಲಕ ಐಸಿಎಂಆರ್‌ಗೆ ಪ್ರಸ್ತಾವನೆ ಕಳುಹಿಸಲಾಗಲಾಗಿತ್ತು’ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.