ಹುಬ್ಬಳ್ಳಿ: ‘ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಬೇಕು ಎಂದು ಡಿ.ಕೆ. ಶಿವಕುಮಾರ್ ಹರಸಾಹಪಡುತ್ತಿದ್ದು, ಇಬ್ಬರ ಮಧ್ಯೆ ತೀವ್ರ ಗುದ್ದಾಟ ಏರ್ಪಟ್ಟಿದೆ. ಯಾವುದೇ ಸಂದರ್ಭದಲ್ಲಿ ಸರ್ಕಾರ ಪತನವಾಗಬಹುದು’ ಎಂದು ಸಂಸದ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸ್ಥಾನಕ್ಕಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡಮಟ್ಟದಲ್ಲಿ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ತಿಳಿದ ಸಿದ್ದರಾಮಯ್ಯ ಮೈಸೂರಿನಲ್ಲಿ ಸರ್ಕಾರದ ಸಾಧನ ಸಮಾವೇಶದ ಹೆಸರಲ್ಲಿ, ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಇದರಿಂದ ಅಸಮಾಧಾನಗೊಂಡ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಭಾಷಣ ಮಾಡುವ ಮೊದಲೇ ವೇದಿಕೆಯಿಂದ ನಿರ್ಗಮಿಸಿದರು. ಇವರಿಬ್ಬರ ಗುದ್ದಾಟದಿಂದ ಸರ್ಕಾರ ಐದು ವರ್ಷ ಪೂರ್ಣಗೊಳಿಸುವುದು ಅನುಮಾನವಾಗಿದೆ’ ಎಂದರು.
.ಸಾಧನಾ ಸಮಾವೇಶ | ಸಿಎಂಗೆ ತವರು ನೆಲದ ಬಲ; ರ್ಯಾಂಪ್ನಲ್ಲಿ ನಡೆದು ಬಂದ ನಾಯಕರು.ಮನೆಯಲ್ಲಿ ಕೂತಿರುವವರಿಗೆಲ್ಲ ವೆಲ್ಕಮ್ ಮಾಡೋಕೆ ಆಗಲ್ಲ: ಸಿಎಂ ಸಿದ್ದರಾಮಯ್ಯ ಗರಂ.
‘ಮನೆಯಲ್ಲಿ ಕುಳಿತಿರುವವರಿಗೆ ಸ್ವಾಗತ ಮಾಡಲು ಆಗುವುದಿಲ್ಲ’ ಎನ್ನುವ ಮೂಲಕ ಸಿದ್ದರಾಮಯ್ಯ ಮನಸ್ಸಿನಲ್ಲಿ ಇದ್ದದ್ದನ್ನು ಹೇಳಿ, ಬಹಿರಂಗವಾಗಿಯೇ ಡಿ.ಕೆ. ಶಿವಕುಮಾರ್ ಅವರಿಗೆ ಸವಾಲ್ ಹಾಕಿದ್ದಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾಗುವ ಅನುಮಾನ ಶುರುವಾಗಿದೆ. ಹೈಕಮಾಂಡ್ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದೋ, ಇಲ್ಲವೋ ಎನ್ನುವ ಸಂಶಯ ಅವರನ್ನು ಕಾಡುತ್ತಿದೆ’ ಎಂದು ಹೇಳಿದರು.

‘ಖುರ್ಚಿಗಾಗಿ ನಡೆಯುತ್ತಿರುವ ಆಂತರಿಕ ಭಿನ್ನಾಭಿಪ್ರಾಯದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಮುಂದಿನ ತಿಂಗಳು ನಡೆಯಲಿರುವ ಅಧಿವೇಶನದಲ್ಲಿ ಶಾಸಕರು ಗಲಾಟೆ ಮಾಡಬಾರದು ಎಂದು, ₹50 ಕೋಟಿ ಅನುದಾನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದ್ದು, ಸಣ್ಣ ಹಾಗೂ ಬೀದಿ ವ್ಯಾಪಾರಸ್ಥರಿಂದಲೂ ಹಣ ವಸೂಲಿಗೆ ಮುಂದಾಗಿದ್ದಾರೆ’ ಎಂದು ಆರೋಪಿಸಿದರು.

‘ಎಐಸಿಸಿ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ್ ಅವರು ರಾಜ್ಯ ಕಾಂಗ್ರೆಸ್ನ ಉಸ್ತುವಾರಿಯಾಗಿ ಕೆಲಸ ಮಾಡಬೇಕೇ ಹೊರತು, ಸರ್ಕಾರದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ. ಶಾಸಕರಿಗೆ ಅನುದಾನ ಕೊಡಿಸುವುದು, ಸಚಿವರ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸುವುದು ಅವರ ಕೆಲಸವಲ್ಲ. ಅದು ಸಂವಿಧಾನ ಬಾಹಿರ ನಡೆಯಾಗಿದೆ. ತಾವೇ ಸೂಪರ್ ಸಿಎಂ ಎನ್ನುವ ಹಾಗೆ ವರ್ತಿಸುತ್ತಿದ್ದಾರೆ’ ಎಂದು ಶೆಟ್ಟರ್ ಕಿಡಿಕಾರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.