ಪರಿಶಿಷ್ಟಜಾತಿ ಮತ್ತು ಪಂಗಡದವರ ಅಭಿವೃದ್ಧಿಗಾಗಿ ಇರುವ ವಿಶೇಷ ಘಟಕ ಯೋಜನೆ ಅನುದಾನದಲ್ಲಿ ₹11 ಸಾವಿರ ಕೋಟಿಯನ್ನು ಐದು ಗ್ಯಾರಂಟಿಗಳ ಜಾರಿಗೆ ಬಳಕೆ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ. ಇದರಲ್ಲಿ ₹7,570 ಕೋಟಿ ಪರಿಶಿಷ್ಟ ಜಾತಿಗೆ ಮತ್ತು ₹3,430 ಕೋಟಿ ಪರಿಶಿಷ್ಟ ಪಂಗಡಗಳ ಜನರಿಗಾಗಿ ಬಳಸಿದ್ದೇವೆ. ಎಸ್.ಸಿ.ಎಸ್.ಪಿ– ಟಿ.ಎಸ್.ಪಿ ಅನುದಾನದಲ್ಲಿ ₹13 ಸಾವಿರ ಕೋಟಿ ಗ್ಯಾರಂಟಿಗಳಿಗೆ ನೀಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರಶ್ನಿಸಿದಾಗ ಆರಂಭದಲ್ಲಿ ಹುರುಳಿಲ್ಲದ ಆರೋಪ ಎಂದ ಸಚಿವರು ಬಳಿಕ ಅನುದಾನ ಬಳಕೆ ಮಾಡಿಕೊಂಡಿರುವುದನ್ನು ಒಪ್ಪಿಕೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.