ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಿ ಆದೇಶ ಹೊರಬಿದ್ದ ಬೆನ್ನಲ್ಲೇ, ಈಗಾಗಲೇ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ನೇಮಕಾತಿ ಪ್ರಾಧಿಕಾರಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಪರಿಶಿಷ್ಟ ಜಾತಿಗೆ ಲಭ್ಯ ಶೇ 15 ಮೀಸಲಾತಿಯಲ್ಲಿ ಪ್ರವರ್ಗ ‘ಎ’ (ಎಡಗೈ ಸಂಬಂಧಿತ ಜಾತಿಗಳು), ಪ್ರವರ್ಗ ‘ಬಿ’ (ಬಲಗೈ ಸಂಬಂಧಿತ ಜಾತಿಗಳು) ಮತ್ತು ಪ್ರವರ್ಗ ‘ಸಿ’ಗೆ (ಸ್ಪೃಶ್ಯ, ಅತಿ ಸೂಕ್ಷ್ಮ, ಸೂಕ್ಷ್ಮ ಅಲೆಮಾರಿ ಜಾತಿಗಳು) ಕ್ರಮವಾಗಿ ಶೇ 5.25, 5.25, 4.50 ಪ್ರಮಾಣದಲ್ಲಿ ಒಳ ಮೀಸಲಾತಿ ನೀಡಲು ಏ.24ರಂದು ನಡೆದ ವಿಶೇಷ ಸಚಿವ ಸಂಪುಟ ಸಭೆ ತೀರ್ಮಾನ ಮಾಡಿತ್ತು. ಈ ಕುರಿತು ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಿದೆ. ಹೀಗಾಗಿ, ನೇಮಕಾತಿಗೆ ಹುದ್ದೆ ಅಡೆ ತಡೆ ಸದ್ಯಕ್ಕೆ ನಿವಾರಣೆಯಾದಂತಾಗಿದೆ.

2025ರ ಸೆ. 3ರಂದು ಹೊರಡಿಸಿದ್ದ ಆದೇಶದ ಅನ್ವಯ ಒಳ ಮೀಸಲಾತಿ ಅಳವಡಿಸಿಕೊಂಡು ನೇಮಕಾತಿ ಪ್ರಕ್ರಿಯೆಯ ಹಂತದಲ್ಲಿರುವ ಅಥವಾ 2026ರ ಫೆ. 27ರ ಆದೇಶದ ಅನ್ವಯ ಒಳ ಮೀಸಲಾತಿ ಅಳವಡಿಸದೇ ಹೊರಡಿಸಿರುವ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಬೇಕು. ಅದರ ಬದಲಿಗೆ, ಪ್ರವರ್ಗ ‘ಎ’, ಪ್ರವರ್ಗ ‘ಬಿ’, ಪ್ರವರ್ಗ ‘ಸಿ’ಗೆ ಕ್ರಮವಾಗಿ ಶೇ 5.25, 5.25, 4.50 ಒಳ ಮೀಸಲಾತಿ ಅಳವಡಿಸಿ ಪರಿಷ್ಕೃತ ನೇಮಕಾತಿ ಅಧಿಸೂಚನೆಯನ್ನು ತಕ್ಷಣ ಹೊರಡಿಸಬೇಕು ಎಂದೂ ಸರ್ಕಾರ ನಿರ್ದೇಶನ ನೀಡಿದೆ.

ಆದೇಶದಲ್ಲಿ ಏನಿದೆ?:

ನೇಮಕಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸಲು 400 ರೋಸ್ಟರ್ ಬಿಂದುಗಳ ವರ್ತುಲಗಳನ್ನು ಪಾಲಿಸಲಾಗುವುದು. ಯಾವುದೇ ವೃಂದದಲ್ಲಿ ಪರಿಶಿಷ್ಟ ಜಾತಿಯ ರೋಸ್ಟರ್ ಬಿಂದುಗಳು ಮೂರಕ್ಕಿಂತ ಕಡಿಮೆ ಇದ್ದರೆ, ಪರಿಶಿಷ್ಟ ಜಾತಿಗೆ ಮೀಸಲಾದ ಆ ಹುದ್ದೆಗಳನ್ನು ‘ಪರಿಶಿಷ್ಟ ಜಾತಿ (ಸಾಮಾನ್ಯ)’ ಎಂದು ಪರಿಗಣಿಸಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಆದೇಶ ವಿವರಿಸಿದೆ.

ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶದ ಅನ್ವಯ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ 17ರಿಂದ ಶೇ 15ಕ್ಕೆ ಸೀಮಿತಗೊಳಿಸಿ ಒಳ ಮೀಸಲಾತಿ ಜಾರಿಗೊಳಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ರಾಜ್ಯ ಸರ್ಕಾರ ಹೆಚ್ಚಿರುವ ಶೇ 24ರಷ್ಟು ಮೀಸಲಾತಿ ಪ್ರಮಾಣವನ್ನು ಕೋರ್ಟ್ ಒಪ್ಪಿದರೆ, ಈ ಹೆಚ್ಚುವರಿ ಶೇಕಡಾ 6ರಷ್ಟು ಹುದ್ದೆಗಳನ್ನು ಬ್ಯಾಕ್ಲಾಗ್ ಹುದ್ದೆಗಳೆಂದು ಪರಿಗಣಿಸಿ ನೇಮಕಾತಿ ಮಾಡಬೇಕು ಎಂದೂ ಆದೇಶದಲ್ಲಿದೆ.

ಪ್ರವರ್ಗ ‘ಸಿ’ ಹುದ್ದೆಗಳಲ್ಲಿ ಅತ್ಯಂತ ಹಿಂದುಳಿದವರಿಗೆ ಶೇ 20:

ಪ್ರವರ್ಗ ‘ಸಿ’ಗೆ ಲಭ್ಯವಾಗುವ ಹುದ್ದೆಗಳಲ್ಲಿ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ಸೀಟುಗಳಲ್ಲಿ ಶೇ 20 ರಷ್ಟನ್ನು ಪರಿಶಿಷ್ಟ ಜಾತಿಗಳಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗುವುದು ಎಂದು ಆದೇಶ ಹೇಳಿದೆ.

ಒಂದೊಮ್ಮೆ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಸೇರಿದವರು ಲಭ್ಯವಾಗದೇ ಇದ್ದರೆ, ಆ ಹುದ್ದೆಗಳನ್ನು ಹಾಗೂ ಪ್ರವೇಶಾತಿ ಸೀಟುಗಳನ್ನು ಪ್ರವರ್ಗ ‘ಸಿ’ಯಲ್ಲಿರುವ ಇತರೆ ಜಾತಿಗಳಿಗೆ ನೀಡಲಾಗುವುದು ಎಂದು ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.