ರಾಮನಗರ: ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸ್ವಾಮೀಜಿ ಅವರ ಫೋನ್ ಕದ್ದಾಲಿಕೆ ಮಾಡಿರುವ ಆರೋಪ ಇತ್ತು. ಹಿಂದಿನ ರಾಜ್ಯ ಬಿಜೆಪಿ ಸರ್ಕಾರ ಮತ್ತು ಈಗಿನ ಕೇಂದ್ರ ಸರ್ಕಾರದ ವಿರುದ್ಧವೂ ಕದ್ದಾಲಿಕೆಯ ಆರೋಪವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನದೇ ಪಕ್ಷದ ಶಾಸಕರ ಫೋನ್ ಕರೆ ಕದ್ದಾಲಿಕೆ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಆರೋಪದ ಕುರಿತು ನಗರದಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮದವರು ಮೈಕ್ ಹಿಡಿಯುತ್ತಿದ್ದಂತೆ ಶಾಸಕರೇ ಎಲ್ಲವನ್ನೂ ಹೇಳುತ್ತಿರುವಾಗ ಫೋನ್ ಕದ್ದಾಲಿಕೆ ಮಾಡುವ ಅಗತ್ಯವೆನಿದೆ? ಎಂದು ಪ್ರಶ್ನಿಸಿದರು.

ಕ್ರಿಮಿನಲ್ ಗಳು, ಭಯೋತ್ಪಾದಕರು ಹಾಗೂ ದೇಶದ್ರೋಹಿ ಕ್ರಿಮಿನಲ್ ಚಟುವಟಿಕೆ ನಡೆಸುವವರ ಮೇಲೆ ನಿಗಾ ಇಡಲು ಅವರ ಫೋನ್ ಕರೆ ಕದ್ದಾಲಿಕೆ ಮಾಡಲಾಗುತ್ತದೆ. ಕುಮಾರಸ್ವಾಮಿ ಅವರು ಹೇಳುವಂತೆ, ನಮ್ಮ ಸರ್ಕಾರ ಯಾರೊಬ್ಬರ ಫೋನ್ ಕರೆಯನ್ನೂ ಕದ್ದಾಲಿಕೆ ಮಾಡುತ್ತಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.