ಬಾಗಲಕೋಟೆ: ‘ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿರುವುದು ಆರ್ಥಿಕ ಕ್ಷೇತ್ರದ ಬಗೆಗಿನ ಅವರ ಅಜ್ಞಾನ, ಆಡಳಿತದ ಅನುಭವದ ಕೊರತೆ ಮತ್ತು ರಾಜಕೀಯ ಹತಾಶೆ ತೋರಿಸುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ಅವರು, ‘ಕಳೆದ ತಿಂಗಳಷ್ಟೇ ಈ ವರ್ಷದ ಬಜೆಟ್ ಮಂಡಿಸಿದ್ದೇನೆ. ಅದು ಅಂಕಿ-ಅಂಶಗಳ ಕಾಗದದ ಕಂತೆ ಅಲ್ಲ. ಏಳು ಕೋಟಿ ಕನ್ನಡಿಗರಿಗೆ ಒಪ್ಪಿಸಿದ ಪ್ರಾಮಾಣಿಕ ಲೆಕ್ಕಪತ್ರ. ಆ ಬಜೆಟ್ ಅನ್ನು ಉಭಯ ಸದನಗಳೂ ಅಂಗೀಕರಿಸಿವೆ. ಇದೇ ನಮ್ಮ ಶ್ವೇತಪತ್ರ’ ಎಂದು ತಿರುಗೇಟು ನೀಡಿದ್ದಾರೆ.

‘ವಿಜಯೇಂದ್ರ ಅವರ ಪಕ್ಷದವರೂ ಸೇರಿ 21 ಶಾಸಕರು ಎತ್ತಿದ್ದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ಇದರ ಬಗ್ಗೆ ಇನ್ನೂ ಅನುಮಾನಗಳಿದ್ದರೆ ವಿವರಣೆ ಕೊಡಲು ಸಿದ್ಧ. ಉಪ ಚುನಾವಣೆಯ ಅಖಾಡದಲ್ಲೇ ಈ ಕುರಿತು ನಿಮ್ಮ ಜೊತೆ ಬಹಿರಂಗ ಚರ್ಚೆಗೂ ಸಿದ್ಧನಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

‘ಕರ್ನಾಟಕದ ಆರ್ಥಿಕ ಸ್ಥಿತಿ ನಿಮ್ಮ ಪಕ್ಷದ ಆಡಳಿತ ಇರುವ ಕೇಂದ್ರ ಸರ್ಕಾರಕ್ಕಿಂತಲೂ ಉತ್ತಮ ಸ್ಥಿತಿಯಲ್ಲಿದೆ. ಬಜೆಟ್ ಗಾತ್ರದಲ್ಲಿ ಶೇ 9.4ರಷ್ಟು ಬೆಳವಣಿಗೆ ಆಗಿದ್ದರೆ, ಕೇಂದ್ರದ್ದು ಶೇ 5.6ರಷ್ಟು ಬೆಳವಣಿಗೆ ಸಾಧಿಸಿದೆ. ದೇಶದ ಜಿಡಿಪಿ ಬೆಳವಣಿಗೆ ಶೇ.7.4ರಷ್ಟಿದ್ದರೆ, ರಾಜ್ಯದ್ದು ಶೇ.8.1ರಷ್ಟು ಬೆಳವಣಿಗೆ ದಾಖಲಿಸಿದೆ’ ಎಂದಿದ್ದಾರೆ.

‘ದಯವಿಟ್ಟು ಒಮ್ಮೆ ನಿಮ್ಮ ಪಕ್ಷದ ಆಡಳಿತವುಳ್ಳ ರಾಜ್ಯಗಳ ಆರ್ಥಿಕತೆ ಮೇಲೆ ಕಣ್ಣಾಡಿಸಿ ಬನ್ನಿ. ಮಹಾರಾಷ್ಟ್ರದ ಸಾಲ ಬಾಕಿ ₹11.02 ಲಕ್ಷ ಕೋಟಿ, ಬಿಹಾರದ ವಿತ್ತೀಯ ಕೊರತೆ ಜಿಎಸ್ ಡಿಪಿ ಶೇ11.8ರಷ್ಟಿದೆ. ರಾಜಸ್ತಾನ, ಮಧ್ಯಪ್ರದೇಶದ ವಿತ್ತೀಯ ಕೊರತೆ ಜಿಎಸ್ಡಿಪಿಯ ಶೇ 3.7ರಷ್ಟಿದೆ. ಆರ್ಥಿಕ ದಿವಾಳಿತನವೇ ಬಿಜೆಪಿ ಆಡಳಿತದ ಮುಖ್ಯ ಗುರುತಾಗಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಬಿಜೆಪಿ ಅಧಿಕಾರದಲ್ಲಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅರ್ಥಿಕತೆಯನ್ನು ಅವಲೋಕಿಸಿದರೆ ಯಾರು ಆರ್ಥಿಕತೆಯನ್ನು ದಿವಾಳಿ ಸ್ಥಿತಿಗೆ ತಳ್ಳಿದವರು ಎಂದು ಸ್ಪಷ್ಟವಾಗುತ್ತದೆ. ವಿಜಯೇಂದ್ರ ಅವರೇ ಇನ್ನೊಮ್ಮೆ ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವ ಮೊದಲು ಹೋಂ ವರ್ಕ್ ಮಾಡಿಕೊಂಡು ಬನ್ನಿ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-51-918039349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.