ಬೆಂಗಳೂರು: ‘ರಾಜ್ಯ ಸರ್ಕಾರದ ಸುಮಾರು 5 ಲಕ್ಷ ನೌಕರರ ಪೈಕಿ ಹಲವರಿಗೆ ಏಪ್ರಿಲ್ 22ನೇ ತಾರೀಕು ಬಂದರೂ ವೇತನ ಪಾವತಿ ಆಗಿಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ನೀತಿಗಳ ವೈಫಲ್ಯ ಮತ್ತು ಆಡಳಿತದಲ್ಲಿನ ಭ್ರಷ್ಟಾಚಾರದ ಕಾರಣಕ್ಕೆ ಹೀಗಾಗಿದೆ’ ಎಂದು ಆರೋಪಿಸಿದ್ದಾರೆ.

‘ರಾಜ್ಯ ಸರ್ಕಾರವು ಹಿಂದಿನ ವರ್ಷದ ಎರಡು ತಿಂಗಳ ಗೃಹಲಕ್ಷ್ಮೀ ಹಣವನ್ನು ನುಂಗಿ ಹಾಕಿತ್ತು. ಈಚೆಗೆ ನಡೆದ ಉಪ ಚುನಾವಣೆ ವೇಳೆ ಗೃಹಲಕ್ಷ್ಮೀ ಖಾತೆಗಳಿಗೆ ಹಣ ಜಮೆ ಮಾಡಿದೆ. ಸರ್ಕಾರಿ ನೌಕರರ ವೇತನದ ಹಣವನ್ನು ತೆಗೆದು, ಗೃಹಲಕ್ಷ್ಮೀ ಯೋಜನೆಗೆ ಬಳಸಿಕೊಳ್ಳಲಾಗಿದೆ’ ಎಂದಿದ್ದಾರೆ.

‘ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನರ್ರಚನೆ ಮತ್ತು ಮುಸ್ಲಿಮರ ತುಷ್ಟೀಕರಣದ ಕಾರಣಕ್ಕೆ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ತಲೆದೋರಿದ್ದು, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ವೈಯಕ್ತಿಕ ಪ್ರತಿಷ್ಠೆಯಲ್ಲಿ ಮುಳುಗಿಹೋಗಿದ್ದಾರೆ. ಅದರ ಪರಿಣಾಮವನ್ನು ರಾಜ್ಯದ ಜನರು ಎದುರಿಸಬೇಕಾಗಿದೆ. ಬಿರುಬೇಸಿಗೆ ಮತ್ತು ನೀರಿಲ್ಲದ ಸ್ಥಿತಿಯಲ್ಲಿ ರಾಜ್ಯದ ಜನರು ಬಸವಳಿದಿದ್ದಾರೆ. ಜನರ ನೆರವಿಗೆ ಧಾವಿಸುವಂತೆ ಸರ್ಕಾರವನ್ನು ಎಚ್ಚರಿಸಲು ಹೋರಾಟ ನಡೆಸುತ್ತೇವೆ’ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-1818744923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.