ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಈ ಸಾಲಿನಲ್ಲಿ ಬುಧವಾರದಿಂದ (ಏಪ್ರಿಲ್ 15) ಮೇ 31ರವರೆಗೆ ಅವಕಾಶ ಕಲ್ಪಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಮಾರ್ಗಸೂಚಿ ಹೊರಡಿಸಿದೆ.

ಎಲ್ಲ ವೃಂದಗಳಿಗೆ (ಗ್ರೂಪ್ ‘ಎ’, ‘ಬಿ’, ‘ಸಿ’, ‘ಡಿ’) ಅನ್ವಯವಾಗುವಂತೆ, ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ 6ನ್ನು ಮೀರದಂತೆ ವರ್ಗಾವಣೆ ಕೈಗೊಳ್ಳಲು ಅವಕಾಶವಿದೆ. ಈ ಪೈಕಿ, ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಅಧಿಕಾರಿಗಳ ವರ್ಗಾವಣೆ ಅಧಿಕಾರವನ್ನು ಆಯಾ ಇಲಾಖೆಗಳ ಸಚಿವರಿಗೆ, ಗ್ರೂಪ್ ‘ಸಿ’ ಮತ್ತು ‘ಡಿ’ ವೃಂದದ ನೌಕರರ ವರ್ಗಾವಣೆ ಅಧಿಕಾರವನ್ನು ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ನೀಡಲಾಗಿದೆ.

ಅಲ್ಲದೆ, ಇಲಾಖೆಗಳ ಮುಖ್ಯಸ್ಥರು ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಅಧಿಕಾರಿಗಳ ವರ್ಗಾವಣೆ ಪ್ರಸ್ತಾವಗಳನ್ನು ಸಚಿವಾಲಯದ ಆಡಳಿತ ಇಲಾಖೆಗಳ ಮೂಲಕವೇ ಸಚಿವರಿಗೆ ಸಲ್ಲಿಸಬೇಕು. ರಾಜ್ಯ ವಿಧಾನಸಭೆಯ ಉಪ ಚುನಾವಣೆಯಲ್ಲಿ ಭಾಗಿಯಾಗಿರುವ ಅಧಿಕಾರಿ, ಸಿಬ್ಬಂದಿಯನ್ನು ಚುನಾವಣಾ ಪ್ರಕ್ರಿಯೆ ಮುಕ್ತಾಯ ಆಗುವವರೆಗೂ ವರ್ಗಾವಣೆಯಿಂದ ಹೊರತುಪಡಿಸಬೇಕು ಎಂದೂ ತಿಳಿಸಲಾಗಿದೆ.

ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಚೇರಿಯಿಂದ ಇನ್ನೊಂದು ಕಚೇರಿಗೆ ಮಾಡುವ ಸ್ಥಳ ನಿಯುಕ್ತಿಯನ್ನು (ಚಲನವಲನ) ವರ್ಗಾವಣೆ ಎಂದು ಪರಿಗಣಿಸಲಾಗುವುದಿಲ್ಲ. ಸಚಿವಾಲಯದಲ್ಲಿ ಕರ್ತವ್ಯಕ್ಕೆ ಸೇರಿದ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳ ನಿಯುಕ್ತಿಗೂ ಇದು ಅನ್ವಯವಾಗಲಿದೆ ಎಂದು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ.

ಈ ಬಾರಿಯ ವರ್ಗಾವಣೆ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ನಿರ್ಧರಿಸಲಾಗಿದೆ, ಹೀಗಾಗಿ, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನೌಕರರು ತಮ್ಮ ಸೇವಾ ದಾಖಲೆಗಳನ್ನು ನಿಖರವಾಗಿ ಒದಗಿಸುವುದು ಕಡ್ಡಾಯ. ಕೇವಲ ವೈಯಕ್ತಿಕ ಬೇಡಿಕೆಗಳಲ್ಲದೆ, ಇಲಾಖೆಯ ಆಡಳಿತಾತ್ಮಕ ಅಗತ್ಯವನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಿ ವರ್ಗಾವಣೆ ಆದೇಶ ಹೊರಡಿಸಲಾಗುವುದು ಎಂದೂ ತಿಳಿಸಲಾಗಿದೆ.

‘ಕೆಲವು ವಿಶೇಷ ಪ್ರಕರಣಗಳಲ್ಲಿ ಮಾನವೀಯ ನೆಲೆಯ ಮೇಲೆ ವರ್ಗಾವಣೆಯಲ್ಲಿ ಆದ್ಯತೆ ನೀಡಲು ಮಾರ್ಗಸೂಚಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿ ನೌಕರರ ವರ್ಗಾವಣೆ ಮನವಿಗಳನ್ನು ಆದ್ಯತೆಯ ಮೇಲೆ ಪರಿಗಣಿಸಲಾಗುವುದು. ಅಲ್ಲದೆ, ಕುಟುಂಬದ ಅನಿವಾರ್ಯ ಪರಿಸ್ಥಿತಿ ಅಥವಾ ಮಕ್ಕಳ ಶಿಕ್ಷಣದಂತಹ ಕಾರಣಗಳಿಗೂ ನಿಯಮಾನುಸಾರ ವಿನಾಯಿತಿ ನೀಡಲಾಗುವುದು’ ಎಂದೂ ಮಾರ್ಗಸೂಚಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.