ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಪಾಲಿನ ಅನುದಾನ ನೀಡದ ಕಾರಣ ರಾಜ್ಯದಲ್ಲಿ ಜಲಜೀವನ್ ಮಿಷನ್ ಅನುಷ್ಠಾನಕ್ಕೆ ಭಾರಿ ಹಿನ್ನಡೆಯಾಗಿದೆ ಎಂದು ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.

ಜೆಜೆಎಂ ಯೋಜನೆಯಡಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಈ ವರ್ಷ ₹570 ಕೋಟಿಯಷ್ಟೇ ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸೋಮಣ್ಣ, ‘2019-20 ಹಾಗೂ 2024-25ರ ಅವಧಿಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ₹28,623 ಕೋಟಿ ಅನುದಾನ ಹಂಚಿಕೆ ಮಾಡಿದ್ದು, ರಾಜ್ಯ ಸರ್ಕಾರ ಕೇವಲ ₹11,760 ಕೋಟಿ ಪಡೆದಿದೆ. ರಾಜ್ಯ ಸರ್ಕಾರ ಈ ಅವಧಿಯಲ್ಲಿ ಕೇವಲ ₹11,097 ಕೋಟಿ ಖರ್ಚು ಮಾಡಿದ್ದೇ ಇದಕ್ಕೆ ಕಾರಣ ಎಂದು ದೂರಿದ್ದಾರೆ.

ಈ ಯೋಜನೆಯಡಿ ಕರ್ನಾಟಕ ಸರ್ಕಾರವು ₹69,487 ಕೋಟಿ ಮೊತ್ತದ 66,344 ಯೋಜನೆಗಳಿಗೆ ಅನುಮೋದನೆ ನೀಡಿದೆ. ಆದರೆ, ಮಾರ್ಚ್ ಅಂತ್ಯದ ವರೆಗೂ ₹1,716 ಕೋಟಿ ಮೊತ್ತದ ಕಾಮಗಾರಿಗಳಿಗೆ ಮಂಜೂರಾತಿ ಆದೇಶ ನೀಡಿಲ್ಲ. ಕೇವಲ 24,888 (ಶೇ 37.50) ಯೋಜನೆಗಳು ಭೌತಿಕವಾಗಿ ಮುಗಿದಿದ್ದು, ಆರ್ಥಿಕವಾಗಿ 9,325 (ಶೇ. 14.05) ಯೋಜನೆಗಳು ಮಾತ್ರ ಪೂರ್ಣಗೊಂಡಿವೆ. ಕೇಂದ್ರ ಸರ್ಕಾರದ ಸಹಕಾರ ಹಾಗೂ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿದ್ದಲ್ಲಿ ರಾಜ್ಯದಲ್ಲಿ ಶೇ 100ರಷ್ಟು ಪ್ರಗತಿ ಆಗುತ್ತಿತ್ತು ಎಂದು ಅವರು ಪ್ರತಿಪಾದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.