ಬೆಂಗಳೂರು: ಇನ್ನು ಮುಂದೆ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಟ್ಟ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆಗಳನ್ನು ನೀಡಬಾರದು. ಅದರ ಬದಲು ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಈ ನಿರ್ದೇಶನವನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು ಎಂದು ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಸರ್ಕಾರ ರಚನೆ ಆದ ಬಳಿಕ ಕನ್ನಡ ಸಂಸ್ಕೃತಿ ಮತ್ತು ಇಂಧನ ಸಚಿವ ಸುನಿಲ್ ಕುಮಾರ್ ಅವರು ಪುಸ್ತಕ ಕೊಡುಗೆ ಅಭಿಯಾನಕ್ಕೆ ಮೇಲ್ಪಂಕ್ತಿ ಹಾಕಿದ್ದರು. ತಮ್ಮನ್ನು ಭೇಟಿಯಾಗಲು ಮತ್ತು ಅಭಿನಂದಿಸಲು ಬರುವವರು ಹಾರ, ತುರಾಯಿ ಮತ್ತು ನೆನಪಿನ ಕಾಣಿಕೆ ತರುವುದು ಬೇಡ. ಏನಾದರೂ ಕೊಡಲೇಬೇಕು ಎಂದಿದ್ದರೆ ಒಂದು ಕನ್ನಡ ಪುಸ್ತಕವನ್ನು ಖರೀದಿಸಿ ತಂದು ಕೊಡಿ ಎಂದು ಮನವಿ ಮಾಡಿದ್ದರು.

ಈ ಮನವಿಯ ಬಳಿಕ ಸುಮಾರು ಎರಡು ಸಾವಿರ ಅತ್ಯುತ್ತಮ ಪುಸ್ತಕಗಳು ಬಂದಿವೆ. ಅವುಗಳನ್ನು ಕಾರ್ಕಳ ಗ್ರಂಥಾಲಯ, ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಶಾಲಾ ಗ್ರಂಥಾಲಯಗಳಿಗೆ ವಿತರಿಸಲು ವ್ಯವಸ್ಥೆ ಮಾಡುವುದಾಗಿ. ಇದರಿಂದ ಜ್ಞಾನ ದಾಹಿಗಳಿಗೆ ನೆರವಾಗುತ್ತದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.