ಪ‍್ರತಿಭಟನೆಯನ್ನು ಪೂರ್ಣವಾಗಿ ಐದು ಡ್ರೋನ್ 20ಕ್ಕೂ ಹೆಚ್ಚು ಖಾಸಗಿ ವಿಡಿಯೊಗ್ರಾಫರ್‌ಗಳ ಮೂಲಕ ಚಿತ್ರೀಕರಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳ ದೃಶ್ಯಗಳು ಇವೆ. ಕಾನೂನು ಉಲ್ಲಂಘನೆ ಪ್ರಕರಣ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು
ಎನ್.ಶಶಿಕುಮಾರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪೊಲೀಸ್ ಕಮಿಷನರ್
ಕಾಂಗ್ರೆಸ್ ಸರ್ಕಾರದ ಕೆಟ್ಟ, ಕೊಳಕು ಆಡಳಿತದಿಂದ ಉದ್ಯೋಗಾಕಾಂಕ್ಷಿಗಳು ಸೇರಿದಂತೆ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ. ‘ಅರಾಜಕತೆ ಗ್ಯಾರಂಟಿ’ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ
ಆರ್. ಅಶೋಕ, ವಿಧಾನಸಭೆ ವಿರೋಧಪಕ್ಷದ ನಾಯಕ
ವಿದ್ಯಾರ್ಥಿ ಒಕ್ಕೂಟದಿಂದ ವಿವಿಧೆಡೆ ಹೋರಾಟ ನಡೆದಿದೆ. ಆದರೆ, ರಾಜ್ಯ ಸರ್ಕಾರವು ಕುಂಭಕರ್ಣ ನಿದ್ರೆಯಲ್ಲಿದೆ. ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡದಿದ್ದರೆ ಬಿಜೆಪಿಯಿಂದಲೇ ಹೋರಾಟ ಹಮ್ಮಿಕೊಳ್ಳಲಾಗುವುದು