ಬೆಂಗಳೂರು: ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ಜಾತಿ ಹಾಗೂ ಲಿಂಗಭೇಧವಿಲ್ಲದೆ ಸರ್ವರಿಗೂ ಮುಕ್ತ ಪ್ರವೇಶ ಎಂಬ ಫಲಕವನ್ನು ಅಳವಡಿಸುವುದು ಕಡ್ಡಾಯ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದೇವಸ್ಥಾನಗಳಿಗೆ ಮುಕ್ತ ಪ್ರವೇಶ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಾವುದೇ ದೇವಸ್ಥಾನಗಳಲ್ಲಿ ದಲಿತರು, ಸ್ತ್ರೀಯರು ಎಂಬ ತಾರತಮ್ಯ ಮಾಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಧಾರ್ಮಿಕ ಸ್ವತಂತ್ರದ ವಾತಾವರಣ ನಿರ್ಮಿಸುವುದೇ ನಿಜವಾದ ಧರ್ಮರಕ್ಷಣೆ ಎಂದು ನಂಬಿದೆ ನಮ್ಮ ಸರ್ಕಾರದ್ದು’ ಎಂದು ಬರೆದುಕೊಂಡಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟರ ಹಾಸ್ಟೆಲ್ಗಳು ಅವ್ಯವಸ್ಥೆಯ ಕೂಪವಾಗಿದ್ದವು. ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಕಡಿತಗೊಳಿಸಲಾಗಿತ್ತು. ದಲಿತರಿಗೆ ಗುಣಮಟ್ಟದ ಶಿಕ್ಷಣ, ಗುಣಮಟ್ಟದ ಆಹಾರ ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಮಹತ್ವದ ಬದಲಾವಣೆ ತರುತ್ತಿದೆ. ಪರಿಶಿಷ್ಟರ ಹಾಸ್ಟೆಲ್ಗಳಲ್ಲಿ ಸೋನಾ ಮಸೂರಿ ಅಕ್ಕಿಯನ್ನು ಬಳಸುವಂತೆ ಸಚಿವರಾದ ಮಹದೇವಪ್ಪ ಹಾಗೂ ಬಿ. ನಾಗೇಂದ್ರ ಆದೇಶಿಸಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.