ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆಗೆ ಆದೇಶ: ಸಚಿವರ ಸೂಚನೆ ಬಳಿಕ ವಾಪಸ್‌

Published 18 ಆಗಸ್ಟ್ 2023, 7:06 IST
Last Updated 18 ಆಗಸ್ಟ್ 2023, 7:06 IST
ಅಕ್ಷರ ಗಾತ್ರ

ಬೆಂಗಳೂರು: ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಅನುದಾನ ತಡೆ ಹಿಡಿಯುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶಿಸಿದೆ.

ಬೆನಲ್ಲೇ ಆದೇಶ ಹಿಂಪಡೆಯಬೇಕು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

2022-23ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ, ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡಬಾರದು, ಶೇ‌ 50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ತಕ್ಷಣ ಅನುದಾನ ತಡೆ ಹಿಡಿಯಬೇಕು, ಅನುದಾನದ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯಬೇಕು ಎನ್ನುವ ಮೂರು ವಿಷಯಗಳನ್ನು ಪ್ರಸ್ತಾಪಿಸಿ ದೇವಸ್ಥಾನಗಳ ಜೀರ್ಣೋದ್ಧಾರ ಅನುದಾನ ಬಿಡುಗಡೆ ತಡೆಹಿಡಿಯಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆದೇಶ ನೀಡಿತ್ತು.

ಬೆನ್ನಲ್ಲೇ ಆದೇಶ ವಾಪಸ್‌ ಪಡೆಯುವಂತೆ ಇಲಾಖೆಯ ಆಯುಕ್ತರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ನೀಡಿದ್ದಾರೆ.

ಗೊಂದಲದಿಂದಾಗಿ ಆಯುಕ್ತರು ಹಣ ತಡೆಹಿಡಿಯುವ ಆದೇಶ ಮಾಡಿದ್ದರು ಎಂದು ಗೊತ್ತಾಗಿದೆ. ಸಚಿವರ ಸೂಚನೆ ಬೆನ್ನಲ್ಲೇ ಆಯುಕ್ತರು ಆದೇಶ ಪಾಪಸ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT