ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಇಪಿ ರದ್ದು ತೀರ್ಮಾನ ರಾಜಕೀಯ ಪ್ರೇರಿತ: ಧರ್ಮೇಂದ್ರ ಪ್ರಧಾನ್‌

Published 17 ಆಗಸ್ಟ್ 2023, 19:30 IST
Last Updated 17 ಆಗಸ್ಟ್ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸುವ ಕಾಂಗ್ರೆಸ್‌ ತೀರ್ಮಾನ ರಾಜಕೀಯ ಪ್ರೇರಿತ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕೇ ವಿನಾ ರಾಜಕೀಯದ ದಾಳವಾಗಬಾರದು ಎಂದಿದ್ದಾರೆ.

‘ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆಯೇ ಹೊರತು ಹಿಂಜರಿಕೆಯಲ್ಲ. ಎನ್‌ಇಪಿ ಎಂಬುದು ಹಲವು ವರ್ಷಗಳ ಗಂಭೀರ ಸಮಾಲೋಚನೆಗಳನ್ನು ಜನರ ಆಶೋತ್ತರಗಳನ್ನು ಪ್ರತಿಬಿಂಬಿಸುವ ಫಲಿತಾಂಶವಾಗಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ಸರ್ಕಾರದ ನಿರ್ಧಾರವು ಕಾಂಗ್ರೆಸ್‌ನ ಸುಧಾರಣೆ ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಗುಣಗಳನ್ನು ಬಹಿರಂಗಪಡಿಸುತ್ತದೆ. ಕರ್ನಾಟಕವು ಪ್ರಗತಿಶೀಲ ಮತ್ತು ಸರ್ವರನ್ನು ಒಳಗೊಳ್ಳುವಿಕೆಗೆ ಬೆಲೆ ಕೊಡುವ ನಾಯಕತ್ವವನ್ನು ಬಯಸುತ್ತದೆಯೇ ಹೊರತು ಕ್ಷುಲ್ಲಕ ರಾಜಕಾರಣವನ್ನಲ್ಲ. ವಿದ್ಯಾರ್ಥಿಗಳ ಭವ್ಯ ಭವಿಷ್ಯತ್ತಿಗೆ ಮೊದಲ ಆದ್ಯತೆ ಕೊಡೋಣ, ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸೋಣ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT