ಬೆಂಗಳೂರು: ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಇಂದು(ಶುಕ್ರವಾರ) ಅಂಗೀಕರಿಸಿದ್ದು, ಅವರ ನೇತೃತ್ವದ ಸಚಿವ ಸಂಪುಟವನ್ನು ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದ ಸಿದ್ದರಾಮಯ್ಯ, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಪತ್ನಿಯ ಅನಾರೋಗ್ಯದ ಕಾರಣ ರಾಜ್ಯಪಾಲರು ಇಂದೋರ್ಗೆ ತೆರಳಿದ್ದರಿಂದ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು.

ಗುರುವಾರ ರಾತ್ರಿ ಬೆಂಗಳೂರಿನಗೆ ವಾಪಸ್ ಆದ ರಾಜ್ಯಪಾಲರು, ಇಂದು ಮುಂಜಾನೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ದೆಹಲಿಗೆ ಸಿದ್ದರಾಮಯ್ಯ ಪಯಣ:

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಬೆಳಿಗ್ಗೆ 9ಕ್ಕೆ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.