ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ‘ರಾಜ ಭವನ’ಗಳ ಹೆಸರನ್ನು ‘ಲೋಕ ಭವನ’ ಎಂದು ಮರುನಾಮಕರಣ ಮಾಡಲಾಗಿದ್ದು, ‘ರಾಜ ಭವನ, ಕರ್ನಾಟಕ’ ಎನ್ನುವುದನ್ನು ‘ಲೋಕ ಭವನ, ಕರ್ನಾಟಕ’ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಬುಧವಾರ ಪತ್ರ ಬರೆದಿರುವ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್, ‘ಹೆಸರು ಬದಲಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮೋದನೆ ನೀಡಿದ್ದಾರೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದೆ’ ಎಂದು ತಿಳಿಸಿದ್ದಾರೆ.

‘ಮುಂದಿನ ದಿನಗಳಲ್ಲಿ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಆದೇಶಗಳು, ಅಧಿಕೃತ ಪತ್ರ ವ್ಯವಹಾರಗಳು, ವೆಬ್ಸೈಟ್ ಹಾಗೂ ಫಲಕಗಳಲ್ಲಿ ‘ರಾಜ ಭವನ ಕರ್ನಾಟಕ’ ಬದಲು ‘ಲೋಕ ಭವನ ಕರ್ನಾಟಕ’ ಎಂದು ಬಳಸಬೇಕು’ ಎಂದೂ ಪತ್ರದಲ್ಲಿ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.