ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸದಸ್ಯರ ಪಟ್ಟಿಯಲ್ಲಿ ಕೆಲವು ಜನಪ್ರತಿನಿಧಿಗಳ ಹೆಸರುಗಳು ಬಿಟ್ಟು ಹೋಗಿರುವುದರಿಂದ ಅವರ ಹೆಸರು ಸೇರಿಸುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ಎರಡನೇ ತಿದ್ದುಪಡಿ ಮಸೂದೆ’ಯೂ ಸೇರಿ ಒಟ್ಟು ಆರು ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ, ಕರ್ನಾಟಕ ಕಲ್ಯಾಣ ನಿಧಿ ತಿದ್ದುಪಡಿ ಮಸೂದೆ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳು ತಿದ್ದುಪಡಿ ಮಸೂದೆ, ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ ಮಸೂದೆ, ಬಾಂಬೆ ಪಬ್ಲಿಕ್ ಟ್ರಸ್ಟ್ ಮಸೂದೆಗಳಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ರಾಜ್ಯಪಾಲರಿಂದ ವಾಪಸ್ ಬಂದಿರುವ ‘ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಮಸೂದೆ’ಗೆ ವಿವರಣೆ ಕೋರಿ ಆಡಳಿತಾತ್ಮಕ ವಿಭಾಗಕ್ಕೆ ಕಳುಹಿಸಲಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಅಂಗೀಕಾರಗೊಂಡ 16 ಮಸೂದೆಗಳನ್ನು ರಾಜ್ಯಪಾಲರ ಅಂಕಿತ ಪಡೆಯಲು ಡಿಸೆಂಬರ್ 30 ರಂದು ಕಳುಹಿಸಲಾಗಿದೆ ಎಂದು ಕಾನೂನು ಇಲಾಖೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.