ಬೆಂಗಳೂರು: ‘ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧದ ಶೇ 60 ಕಮಿಷನ್ ಆರೋಪವನ್ನೂ ಸೇರಿಸಿ ಎಸ್ಐಟಿ ತನಿಖೆ ನಡೆಸಲಿ’ ಎಂದು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಶೇ 40 ಕಮಿಷನ್ ಆರೋಪದ ತನಿಖೆಗೆ ಎಸ್ಐಟಿ ರಚಿಸಲು ತೀರ್ಮಾನಿಸಿದೆ. ಹಿಂದಿನ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ್ದರು. ಅದರ ತನಿಖೆಗಾಗಿ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೂ ಗೊತ್ತಾಗಬೇಕು. ಹಾಗೆಯೇ, ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ ಲೋಕೋಪಯೋಗಿ, ಅಬಕಾರಿ, ವಿದ್ಯುತ್ ಗುತ್ತಿಗೆದಾರರ ಸಂಘ ಮಾಡಿರುವ ಶೇ 60 ಕಮಿಷನ್ ಆರೋಪದ ಬಗ್ಗೆಯೂ ಎಸ್ಐಟಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

‘ತಮ್ಮ ಸರ್ಕಾರದ ಮೇಲಿನ ಆರೋಪಕ್ಕೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಮಿಷನ್ ಕೇಳಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಿ ಎಂದಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಿದಾಗ ಮುಖ್ಯಮಂತ್ರಿಯಾಗಿದ್ದ ನಾನು ಇದೇ ಮಾತು ಹೇಳಿದ್ದೆ. ಯಾರೂ ದೂರು ಕೊಡಲಿಲ್ಲ. ಅವರ ಬಳಿ ದಾಖಲೆ ಇರಲಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.