ಬೆಂಗಳೂರು: ‘ನಾನು ಸರ್ಕಾರದಲ್ಲಿದ್ದೇನೆ. ಸಮಾಜದವರ ಅಭಿಪ್ರಾಯಗಳ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ದೆಹಲಿಗೆ ತೆರಳುವ ಮೊದಲು ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಭಾನುವಾರ ಅವರು ಮಾತನಾಡಿದರು,

ಶನಿವಾರ ನಡೆದಿದ್ದ ಒಕ್ಕಲಿಗ ಮಠಾಧೀಶರ ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆಯನ್ನು ಮುಂದೂಡುವಂತೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಈ ಬಗ್ಗೆ ಕೇಳಿದಾಗ ಅವರು, ‘ಆ ಬಗ್ಗೆ ಈಗ ಪ್ರತಿಕ್ರಿಯಿಸುವುದಿಲ್ಲ’ ಎಂದರು.

ದೆಹಲಿ ಭೇಟಿಯ ಕುರಿತು ಕೇಳಿದಾಗ, ‘ಕಾವೇರಿ ನೀರಿನ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ದಿನಾಂಕ ನಿಗದಿಯಾಗಿದ್ದು, ಈ ಬಗ್ಗೆ ವಕೀಲರುಗಳ ಬಳಿ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕೆ ತೆರಳುತ್ತಿರುವೆ’ ಎಂದು ತಿಳಿಸಿದರು.
.ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಡಿಕೆಶಿ–ಎಚ್ಡಿಕೆ! ಜಾತಿ ಗಣತಿಗೆ ಒಕ್ಕಲಿಗರ ಸಭೆ.ಜಾತಿ ಸಮೀಕ್ಷೆ | ಒಕ್ಕಲಿಗ ಎಂದೇ ನಮೂದಿಸಿ: ಅನ್ನದಾನೇಶ್ವರನಾಥ ಸ್ವಾಮೀಜಿ .ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮುಂದೂಡಿ: ಒಕ್ಕಲಿಗ ಸಮುದಾಯ.Cast census| ಸಮೀಕ್ಷೆಯಲ್ಲಿ ಒಕ್ಕಲಿಗ ಎಂದೇ ನಮೂದಿಸಿ: ಮಾಜಿ ಶಾಸಕ ವಿ.ಕೃಷ್ಣಪ್ಪ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.