ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ: ಸಿದ್ದರಾಮಯ್ಯ ವಿರುದ್ಧ HDK ಗರಂ

Published 9 ಆಗಸ್ಟ್ 2023, 12:53 IST
Last Updated 9 ಆಗಸ್ಟ್ 2023, 12:53 IST
ಅಕ್ಷರ ಗಾತ್ರ

ಬೆಂಗಳೂರು: ‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ’ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಕೆಂಪಣ್ಣ ಹೇಳಿಕೆ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಎಚ್‌ಡಿಕೆ, ‘ಕೆಂಪಣ್ಣ ಅವರ ಶೇಕಡ 40ರಷ್ಟು ಮಿಷನ್‌ ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ?, ಏನು ಇದರ ಗುಟ್ಟು’ ಎಂದು ಪ್ರಶ್ನಿಸಿದ್ದಾರೆ.

‘ಈಗ ವಿಷಯಾಂತರ ಮಾಡಿ, ಕುಮಾರಸ್ವಾಮಿಯ ಟೀಕೆ, ಭಾಷೆ, ಅರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ. ಆದರೆ; ಅನುದಿನವೂ ವರ್ಗಾವಣೆ, ಕಮೀಷನ್ ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು? ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ’ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ?, ಸರ್ಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ?, ಮಾನಸಿಕ ಸ್ಥಿಮಿತತೆ ಎಂದರೆ ಸರ್ಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಗುಡುಗಿದ್ದಾರೆ.

‘ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ‘ಸಿದ್ದಕಲೆ’ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಮುಖ್ಯಮಂತ್ರಿಗಳ ಕಚೇರಿಯ ಐದಾರು ಟಿಪ್ಪಣಿಗಳು ‘ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ’ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ’ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟುಗಳನ್ನು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಆಕ್ರೋಶ ಹೊರಹಾಕಿದ್ದಾರೆ.

ಓದಿ... ಬಿಜೆಪಿಗರು ಭಾರತ ಮಾತೆಯ ರಕ್ಷಕರಲ್ಲ, ಹಂತಕರು: ರಾಹುಲ್ ಗಾಂಧಿ ಗುಡುಗು

ನಿಮ್ಮ ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ: ಸಿದ್ದರಾಮಯ್ಯ ವಿರುದ್ಧ HDK ಗರಂ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT