ಬೆಂಗಳೂರು: ಕೋವಿಡ್‌ನಿಂದಾಗಿ ಸಂಕಷ್ಟದಲ್ಲಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಚೈತನ್ಯ ತುಂಬಲು ರಾಜ್ಯ ಸರ್ಕಾರ ಕೆಲವು ರಿಯಾಯಿತಿಗಳನ್ನು ಪ್ರಕಟಿಸಿದೆ.

ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್‌ಗಳಿಗೆ ಈ ಸಾಲಿಗೆ (2021–21) ಆಸ್ತಿ ತೆರಿಗೆ ಪಾವತಿಯಲ್ಲಿ ಶೇ 50 ರಷ್ಟು ವಿನಾಯಿತಿ ನೀಡಲಾಗಿದೆ. ಅಲ್ಲದೆ, ಏಪ್ರಿಲ್ ಮತ್ತು ಜೂನ್ ತಿಂಗಳ ವಿದ್ಯುಚ್ಚಕ್ತಿ ಶುಲ್ಕವನ್ನೂ ಮನ್ನಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ.

ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕಗಳಲ್ಲಿ ಶೇ 50 ರಷ್ಟು ಮೊತ್ತವನ್ನು ಪಾವತಿಸುವುದು ಮತ್ತು ಉಳಿದ ಶೇ 50 ರಷ್ಟು ಮೊತ್ತವನ್ನು ಈ ವರ್ಷದ ಡಿಸೆಂಬರ್ 31 ರೊಳಗೆ ಪಾವತಿಸಲು ಆರು ತಿಂಗಳ ಕಾಲಾವಕಾಶ ನೀಡಲಾಗಿದೆ.

ಈಗಾಗಲೇ ಪ್ರಕಟಿಸಿರುವಂತೆ ನೋಂದಣಿ ಮಾಡಿಕೊಂಡಿರುವ ಪ್ರತಿ ಪ್ರವಾಸಿ ಮಾರ್ಗದರ್ಶಿಗೆ ₹5,000 ಪರಿಹಾರದ ಮೊತ್ತವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

‘ಈ ಎಲ್ಲ ನೆರವಿನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಮತ್ತೆ ಚೇತರಿಕೆ ಕಾಣಲು ಸಾಧ್ಯವಿದೆ. ಇದರಿಂದ ಲಕ್ಷಾಂತರ ಉದ್ಯೋಗಿಗಳಿಗೆ ಅನುಕೂಲವಾಗಲಿದ್ದು, ಆರ್ಥಿಕ ವಹಿವಾಟು ಹೆಚ್ಚಲು ಸಹಾಯವಾಗುತ್ತದೆ’ ಎಂದು ರಾಜ್ಯ ಪ್ರವಾಸೋದ್ಯಮ ಸೊಸೈಟಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.