ಬೆಂಗಳೂರು: ‘ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಇಲಾಖೆಯ ಅಧಿಕೃತ ಎಫ್ಎಸ್ಎಲ್ ವರದಿಯಲ್ಲಿ ಖಚಿತವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ. ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಪೊಲೀಸರು ಮುಂದಿನ ಕ್ರಮ ತೆಗೆದುಕೊಳ್ಳಲಿದ್ದಾರೆ’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಖಾಸಗಿಯವರೂ ಎಫ್ಎಸ್ಎಲ್ ವರದಿ ಬಿಡುಗಡೆ ಮಾಡಿದ್ದರು. ನಾವು ಅದನ್ನು ಅಧಿಕೃತವೆಂದು ಪರಿಗಣಿಸುವುದಿಲ್ಲ. ನಾವು ಅವರಿಗೆ ಯಾವುದೇ ರೀತಿಯ ಮಾನ್ಯತೆ ನೀಡಿಲ್ಲ’ ಎಂದರು.

‘ಮಂಡ್ಯದಲ್ಲಿ 2022 ನವೆಂಬರ್ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ. ಆಗ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ? ಹಳೆಯ ಪ್ರಕರಣ ಈಗ ಬಯಲಿಗೆ ಬಂದಿದ್ದು, ಮಂಡ್ಯ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ಮೇಲೆ ಪ್ರಕರಣ ಒಂದೇ ಅಲ್ಲವೇ. ಕಾನೂನು ಎಲ್ಲರಿಗೂ ಒಂದೇ. ಯಾವ ಸಂದರ್ಭದಲ್ಲಿ ಕೂಗಿದ್ದಾರೆ ಎಂಬುದು ತನಿಖೆಯಿಂದ ಹೊರಬರಲಿದೆ’ ಎಂದರು.

‘ಪಾಕಿಸ್ತಾನ ಪರ ಘೋಷಣೆ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರ ಆಗಿದೆಯೇ?’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾಕೆ ಮುಜುಗರ ಆಗುತ್ತದೆ. ಸರ್ಕಾರ ಯಾರಿಗಾದರೂ ಪ್ರಾಯೋಜಕತ್ವ ನೀಡಿದೆಯೇ? ಅವನ್ಯಾರೋ ಕೂಗಿದ್ದಾನೆ ಅನ್ನುವುದನ್ನು ಖಚಿತಪಡಿಸಿಕೊಳ್ಳಲು ಕಾಯುತ್ತಿದ್ದೆವು. ಸರ್ಕಾರಕ್ಕೆ ಮುಜುಗರ ಆಗುವಂಥದ್ದು ಏನೂ ಇಲ್ಲ’ ಎಂದರು.

ರಾಮೇಶ್ವರ ಕೆಫೆ ಹೋಟೆಲ್ನಲ್ಲಿ ನಡೆದ ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ, ‘ಯುಎಪಿಎ ಪ್ರಕರಣಗಳು ನೇರವಾಗಿ ಕೇಂದ್ರದ ತನಿಖಾ ಸಂಸ್ಥೆಗಳಾದ ಎನ್ಐಎ ಅಥವಾ ಸಿಬಿಐಗೆ ಬರುತ್ತದೆ. ಎನ್ಐಎ ಅವರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಬಿ ಪೊಲೀಸರೂ ತನಿಖೆ ನಡೆಸುತ್ತಿದ್ದಾರೆ. ನಮ್ಮಲ್ಲಿರುವ ಮಾಹಿತಿಯನ್ನು ಎನ್ಐಎ ಜೊತೆ ಹಂಚಿಕೊಳ್ಳಲಾಗುವುದು. ಪ್ರಕರಣ ನಡೆದ ಮರುದಿನ ಸಿಸಿಬಿ ಪೊಲೀಸರು ಕೂಡಾ ಜೈಲಿನಲ್ಲಿರುವರನ್ನು ವಿಚಾರಣೆ ನಡೆಸಿದ್ದರು’ ಎಂದರು.

‘ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ’

ಬೆಂಗಳೂರು: ‘ದೇಶದ್ರೋಹ ಕೆಲಸದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದೇವೆ. ತನಿಖೆಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ನಮ್ಮ ರಾಜ್ಯಸಭಾ ಸದಸ್ಯರು (ಸಯ್ಯದ್ ನಾಸೀರ್ ಹುಸೇನ್) ಕೂಡ ಹೇಳಿಕೆ ನೀಡಿದ್ದರು’ ಎಂದರು.

‘ತಮಗೆ ಬೇಕಾದವರ ಕೈಯಿಂದ ಬಿಜೆಪಿಯವರು ಏನೇ ವರದಿ ತರಿಸಿಕೊಂಡರೂ ಅದು ಅಧಿಕೃತವಲ್ಲ. ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ಮಾಡಲಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಬಿಜೆಪಿ ಕಾರ್ಯಕರ್ತರ ಪ್ರಕರಣವೂ ತನಿಖೆ: ‘ಮಂಡ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದ ಪ್ರಕರಣವನ್ನು ತನಿಖೆ ಮಾಡುತ್ತೇವೆ. ಬಿಜೆಪಿ ಸ್ನೇಹಿತರು ಅದಕ್ಕೂ ಉತ್ತರ ನೀಡಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.