ಬೆಂಗಳೂರು: ‘ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ ಮಸೂದೆ’ಗೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಅವರು, ಭವಿಷ್ಯ ನಿಧಿ, ಅಪಘಾತ ಸೌಲಭ್ಯ, ವಸತಿ, ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ, ಕಾರ್ಮಿಕ ಕೌಶಲಾಭಿವೃದ್ಧಿ, ಅಂತ್ಯಸಂಸ್ಕಾರ ಧನ ಸಹಾಯ ನೀಡಲಾಗುವುದು. ಇದಕ್ಕಾಗಿ ಪ್ರತಿ ವಹಿವಾಟಿನ ಮೇಲೆ ಶೇ 1ರಿಂದ ಶೇ 2 ಮೀರದಂತೆ ಕ್ಷೇಮಾಭಿವೃದ್ಧಿ ಶುಲ್ಕ ಸಂಗ್ರಹಿಸಲಾಗುವುದು ಎಂದರು.

ಪ್ಲಾಟ್ ಫಾರ್ಮ್ ಆಧಾರಿತ ಸೇವೆ ಗಳಾದ ಸ್ವಿಗ್ಗಿ, ಜೊಮಾಟೊಗಳಲ್ಲಿ ಫುಡ್ ಡೆಲವರಿ ಮಾಡುವ, ರೈಡ್ ಶೇರಿಂಗ್ ಸೇವೆಗಳಾದ ಓಲಾ, ಉಬರ್ ಮತ್ತು ನಮ್ಮ ಯಾತ್ರಿ ಇತ್ಯಾದಿ ಅಪ್ಲಿಕೇಷನ್ ಆಧಾರಿತ ಚಾಲಕರು,
ಇ–ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಮತ್ತಿತರ ಕ್ಷೇತ್ರಗಳಲ್ಲಿ ಪೂರ್ಣಕಾಲಿಕ ಅಥವಾ ಅರೆಕಾಲಿಕ ಡೆಲಿವರಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಕಾರ್ಮಿಕ ಕಾನೂನುಗಳಡಿ ಲಭ್ಯವಿರುವ ಸಾಮಾಜಿಕ ಭದ್ರತಾ
ಸೌಲಭ್ಯಗಳನ್ನು ಪಡೆಯಲಿದ್ದಾರೆ ಎಂದು ಪಾಟೀಲ ತಿಳಿಸಿದರು.

ಗಿಗ್ ಕಾರ್ಮಿಕರು ಸರಕು ಸೇವೆಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ಸೂಚಿಸಿದ ಸ್ಥಳಗಳಿಗೆ ವಾಹನಗಳಲ್ಲಿ ತೆರಳಿ ವಿತರಿಸುತ್ತಾರೆ. ಅಂತಹ ಸಂದರ್ಭ ಗಳಲ್ಲಿ ಅಪಘಾತಕ್ಕೆ ಒಳಗಾಗಬಹುದು. ಅಪಘಾತದಿಂದ ಮರಣ, ಶಾಶ್ವತ ಅಂಗವೈಕಲ್ಯ ಹೊಂದಿದರೆ ಅವರು ಮತ್ತು ಅವರ ಅವಲಂಬಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಅಂತಹ ಸಂದರ್ಭದಲ್ಲಿ ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತೆ ಒದಗಿಸುವುದು ಸರ್ಕಾರದ ಹೊಣೆಗಾರಿಕೆ ಎಂದು ಹೇಳಿದರು.

ದೇಶದ ದುಡಿಯುವ ವರ್ಗದಲ್ಲಿ ಶೇ 83ಕ್ಕೂ ಹೆಚ್ಚು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಇರುವುದಾಗಿ ಅಂದಾಜಿಸಲಾಗಿದೆ. ಅವರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರಾಗದಂತೆ ಇವರ ಜೀವನ ಮಟ್ಟವನ್ನು ಉತ್ತಮಪಡಿಸಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಕಾಯ್ದೆ ಅಗತ್ಯವಿದೆ. ರಾಜ್ಯದಲ್ಲಿ 2.30 ಲಕ್ಷ ಗಿಗ್ ಕಾರ್ಮಿಕರಿದ್ದಾರೆ ಎಂದರು.

ಕಲ್ಯಾಣ ಮಂಡಳಿ ರಚನೆ: ನಿಧಿ ಸಂಗ್ರಹಣೆ, ನಿರ್ವಹಣೆ ಹಾಗೂ ಫಲಾನುಭವಿಗಳಿಗೆ ಮತ್ತು ಅವರ ಅವಲಂಬಿತರಿಗೆ ಸಾಮಾಜಿಕ ಭದ್ರತಾ ಸೌಲಭ್ಯಗಳ ‘ಕರ್ನಾಟಕ ಪ್ಲಾಟ್ಫಾರ್ಮ್ ಆಧಾರಿತ ಗಿಗ್ ಕಾರ್ಮಿಕ ಕಲ್ಯಾಣ ಮಂಡಳಿ’ ಸ್ಥಾಪಿಸಲಾಗುವುದು ಎಂದು ಪಾಟೀಲ ತಿಳಿಸಿದರು.

ಪ್ರಮುಖ ತೀರ್ಮಾನಗಳು

38 ತಾಲ್ಲೂಕು ಆಸ್ಪತ್ರೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತ ಕ್ಷಯರೋಗಿಗಳು ಭೇಟಿ ನೀಡುವ 121 ಸಮುದಾಯ ಆರೋಗ್ಯ ಕೇಂದ್ರಗಳಿಗೆ ₹14.24 ಕೋಟಿ ವೆಚ್ಚದಲ್ಲಿ 159 ಟ್ರೂ ನಾಟ್ ಯಂತ್ರಗಳನ್ನು ಖರೀದಿಸಲು ಒಪ್ಪಿಗೆ

ಚಿಕ್ಕಮಗಳೂರು ಜಿಲ್ಲೆ ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ದಾಖಲಾಗಿರುವ ಎಸ್ಎಲ್ಪಿ ದಾವೆ ಪ್ರಕರಣದಲ್ಲಿ ಸಚಿವ ಸಂಪುಟ ಉಪಸಮಿತಿ ಶಿಫಾರಸುಗಳನ್ನು ಒಳಗೊಂಡಂತೆ ಲಿಖಿತ ಆಕ್ಷೇಪಣಾ ಹೇಳಿಕೆಗಳನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ

ಸಾರಿಗೆ ಇಲಾಖೆ 4,000 ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ವಿಶ್ವಬ್ಯಾಂಕ್ನಿಂದ ಕಡಿಮೆ ಬಡ್ಡಿದರದಲ್ಲಿ ಖರೀದಿಸಲು ಸಾಲ ಪಡೆಯಲು ಘಟನೋತ್ತರ ಅನುಮೋದನೆ

ಇಎಸ್ಐ ಆಸ್ಪತ್ರೆಗಳಿಗೆ ₹64 ಕೋಟಿ ವೆಚ್ಚದಲ್ಲಿ ಪರಿಕರಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ವೇತನ ಪರಿಷ್ಕರಣೆಗಳಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಕರ್ನಾಟಕ ಮಾಹಿತಿ ಆಯೋಗದಂತಹ ಇತರ ಶಾಸನಬದ್ಧ ಸಂಸ್ಥೆಗಳ ವೇತನ ಪರಿಷ್ಕರಣೆಯಲ್ಲಿ ಏಕರೂಪತೆಯನ್ನು ಕಾಪಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗ (ಸೇವಾ ಷರತ್ತುಗಳು) ನಿಯಮಗಳು, 1957ರ ನಿಯಮ–4 ಕ್ಕೆ ತಿದ್ದುಪಡಿಗೆ ಒಪ್ಪಿಗೆ

ಮಾಜಿ ಸಂಸದ ನಳಿನ್ಕುಮಾರ ಕಟೀಲ್ ಅವರಿಗೆ ಬಿಡಿಎ ವತಿಯಿಂದ ಜಿ ಕೆಟಗರಿ ನಿವೇಶನ ಮಂಜೂರು ಮಾಡಿರುವ ವಿಷಯವನ್ನು ತಾಂತ್ರಿಕ ಕಾರಣಗಳಿಂದಾಗಿ ಮುಂದೂಡಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.