ಬೆಂಗಳೂರು: ಪ್ರತಿ ಮನೆಗೂ ತೆರಳಿ 30 ವರ್ಷ ಮೇಲ್ಪಟ್ಟವರನ್ನು ತಪಾಸಣೆಗೆ ಒಳಪಡಿಸುವ ಗೃಹ ಆರೋಗ್ಯ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುತ್ತಿದೆ. ಉಚಿತ ತಪಾಸಣೆ ಜತೆಗೆ, ಔಷಧವನ್ನೂ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಗೃಹ ಆರೋಗ್ಯ ಯೋಜನೆ ಅನುಷ್ಠಾನ ಕಾರ್ಯಾಗಾರ ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಮಾನಸಿಕ ಆರೋಗ್ಯ ಸಮಸ್ಯೆ, ಮೂತ್ರಪಿಂಡ ಸಮಸ್ಯೆಯಂತಹ ದೀರ್ಘಕಾಲದ 14 ಕಾಯಿಲೆಗಳು ಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಇಂತಹ ರೋಗಗಳನ್ನು ಪತ್ತೆ ಹಚ್ಚಿದರೆ ಆರಂಭದಲ್ಲೇ ಸೂಕ್ತ ಚಿಕತ್ಸೆ ಪಡೆದು ಗುಣಮುಖರಾಗಬಹುದು ಎಂದರು.

ಕೋಲಾರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಿದಾಗ ಹಲವು ಸಂಗತಿಗಳು ಪತ್ತೆಯಾಗಿವೆ. ಅವೆಲ್ಲವನ್ನೂ ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆ ತರಲಾಗಿದೆ. ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲೂ ಉಚಿತವಾಗಿ ತಪಾಸಣೆ ನಡೆಸಲಾಗುತ್ತದೆ. ಮೇಲ್ವಿಚಾರಣೆ, ತಪಾಸಣೆ ಕುರಿತು ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಕೈಪಿಡಿ ನೀಡಲಾಗುತ್ತಿದೆ. ತಪಾಸಣೆ ನಡೆಸಿದ ತಕ್ಷಣ ಎನ್ಸಿಡಿ ಪೊರ್ಟಲ್ನಲ್ಲಿ ರೋಗಿಗಳ ದತ್ತಾಂಶ ನಮೂದಿಸಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.