ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನಸ್ಪಂದನ ಕಾರ್ಯಕ್ರಮ: 11 ದಿನದಲ್ಲಿ 4,321 ಅರ್ಜಿ ವಿಲೇವಾರಿ

ವಿಭಾಗ ಮಟ್ಟದಲ್ಲಿಯೂ ಅಹವಾಲು ಆಲಿಕೆ
Published 19 ಫೆಬ್ರುವರಿ 2024, 16:13 IST
Last Updated 19 ಫೆಬ್ರುವರಿ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸೌಧ ಮುಂಭಾಗದಲ್ಲಿ ಮುಖ್ಯಮಂತ್ರಿ ಇತ್ತೀಚೆಗೆ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ 14,685 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ, 4,321 ಅರ್ಜಿಗಳನ್ನು ಕೇವಲ 11 ದಿನಗಳಲ್ಲಿ ವಿಲೇವಾರಿ ಮಾಡಲಾಗಿದೆ’ ಎಂದು ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದ ಪರಾಮರ್ಶೆ ಮತ್ತು ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ಸೋಮವಾರ ನಡೆಸಿದ ಅವರು, ಬಾಕಿ ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿ ಮಾಡುವಂತೆ ಸೂಚಿಸಿದರು.

‘ಜನಸ್ಪಂದನ ಕಾರ್ಯಕ್ರಮವನ್ನು ವಿಭಾಗ ಮಟ್ಟದಲ್ಲಿ ನಡೆಸುವ ಕುರಿತು ಚಿಂತನೆ ನಡೆದಿದೆ. ಮೊದಲಿಗೆ ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಖುದ್ದು ಭಾಗವಹಿಸಲು ಸೂಚಿಸಲಾಗುವುದು’ ಎಂದರು.

‘ಮುಂದಿನ ಜನಸ್ಪಂದನ ಕಾರ್ಯಕ್ರಮಗಳನ್ನು ಇನ್ನಷ್ಟು ವ್ಯವಸ್ಥಿತವಾಗಿ ಆಯೋಜಿಸುವಂತೆ ಮತ್ತು ಸಾರ್ವಜನಿಕ ಕುಂದುಕೊರತೆ ನಿವಾರಣೆಯ ಈ ಕಾರ್ಯಕ್ರಮಗಳು ದೇಶಕ್ಕೇ ಮಾದರಿಯಾಗುವಂತೆ ನಡೆಯಬೇಕು’ ಎಂದೂ ಅವರು ಸಲಹೆ ನೀಡಿದರು.

‘ತಮ್ಮ ಅಹವಾಲುಗಳೊಂದಿಗೆ ಜನಸ್ಪಂದನಕ್ಕೆ ಬರುವ ಜನರ ಕುರಿತು ಕಾಳಜಿ ವಹಿಸಬೇಕು. ಅವರ ನೋವಿಗೆ ಅಧಿಕಾರಿಗಳು ಸ್ಪಂದಿಸುತ್ತಿದ್ದಾರೆಂಬ ಸಂತೃಪ್ತಿ ಅವರಲ್ಲಿ ಮೂಡಬೇಕು. ನಿಯಮಾನುಸಾರ ಅನುಷ್ಠಾನಗೊಳಿಸಲು ಸಾಧ್ಯವಿಲ್ಲದ ಅಹವಾಲುಗಳಿಗೆ ಸ್ಪಷ್ಟ ಹಿಂಬರಹ ನೀಡಬೇಕು. ಅರ್ಜಿದಾರರು ಪದೇ ಪದೇ ಜನಸ್ಪಂದನ ಕಾರ್ಯಕ್ರಮಕ್ಕೆ ಅದೇ ಅಹವಾಲಿನೊಂದಿಗೆ ಬರುವಂತೆ ಆಗಬಾರದು’ ಎಂದೂ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಯ ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ಇ-ಆಡಳಿತ ಇಲಾಖೆಯ ಕಾರ್ಯದರ್ಶಿ ಉಜ್ವಲ್‌ ಕುಮಾರ್‌ ಘೋಷ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT