ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಜಮೀನು ರಕ್ಷಣೆಗೆ ‘ಲ್ಯಾಂಡ್ ಬೀಟ್ ಪ್ರೋಗ್ರಾಂ’: ಕೃಷ್ಣ ಬೈರೇಗೌಡ

Published 11 ಜೂನ್ 2024, 23:52 IST
Last Updated 11 ಜೂನ್ 2024, 23:52 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ಜಮೀನುಗಳನ್ನು ರಕ್ಷಿಸಲು ‘ಲ್ಯಾಂಡ್ ಬೀಟ್ ಪ್ರೋಗ್ರಾಂ’ಗೆ ಚಾಲನೆ ನೀಡಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

‘14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನು ಒಳಗೊಂಡ (ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ’ ಎಂದಿದ್ದಾರೆ.

‘ಜಿಪಿಎಸ್ ಬಳಸಿ ಪ್ರತಿ ಆಸ್ತಿಯನ್ನು ತಂತ್ರಾಂಶದಲ್ಲಿ ಮ್ಯಾಪ್ ಮಾಡಲಾಗುತ್ತದೆ. ಒತ್ತುವರಿ ಪರಿಶೀಲಿಸಲು ಅಧಿಕಾರಿಗಳು ಎಲ್ಲ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಯಾವುದೇ ಸಮಸ್ಯೆಗಳನ್ನು ನೇರವಾಗಿ ತಂತ್ರಾಂಶದ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

‘ಈವರೆಗೆ ಗ್ರಾಮ ಆಡಳಿತಾಧಿಕಾರಿಗಳು 5.90 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ಪರಿಶೀಲಿಸಿದ್ದಾರೆ. ಮುಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ’ ಎಂದಿದ್ದಾರೆ.

‘ಇಲಾಖೆಯ ಅಧಿಕಾರಿಗಳ ಮತ್ತು ಗ್ರಾಮ ಆಡಳಿತಾಧಿಕಾರಿಗಳ ಪರಿಶ್ರಮದಿಂದಾಗಿ ಪ್ರತಿ ಗ್ರಾಮಗಳ ಸರ್ಕಾರಿ ಆಸ್ತಿಗಳ ವಿವರವಾದ ಡಿಜಿಟಲ್ ದಾಖಲೆ ಸಿದ್ಧಪಡಿಸಲು ಸಾಧ್ಯವಾಗಿದೆ. ಈ ಆಸ್ತಿಗಳನ್ನು ಸುರಕ್ಷಿತವಾಗಿಡಲು ಆಗಾಗ ಸ್ಥಳ ಪರಿಶೀಲಿಸಲಾಗುವುದು. ಸರ್ಕಾರಿ ಜಮೀನುಗಳು ಒತ್ತುವರಿಯಾಗುವ ದೀರ್ಘಕಾಲದ ಸಮಸ್ಯೆಗೆ ಹೊಸ ವ್ಯವಸ್ಥೆಯಿಂದ ಪರಿಹಾರ ಸಿಗಲಿದೆ’ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT