ಬಿಜೆಪಿ ಆರೋಪಕ್ಕೆ ತಮ್ಮ ‘ಎಕ್ಸ್’ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ‘ನಾನು ಬಾಗ್ಮನೆಯಿಂದ ₹ 4 ಕೋಟಿ ಸಾಲ ತೆಗೆದುಕೊಂಡಿದ್ದು 2001ರಲ್ಲಿ. ನೀವು (ಬಿಜೆಪಿ) ಬೊಬ್ಬೆ ಹೊಡೆಯುತ್ತಿರುವಂತೆ 2023ರಲ್ಲೂ ಅಲ್ಲ, ಚುನಾವಣೆ ಖರ್ಚಿಗಾಗಿಯೂ ಅಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಬಾರಿ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ. ಈ ಆರೋಪ ಕುಚೇಷ್ಟೆ, ದುರುದ್ದೇಶದಿಂದ ಕೂಡಿದೆ’ ಎಂದಿದ್ದಾರೆ.