ಬೆಂಗಳೂರು: ಎರಡು ಡೋಸ್ ಲಸಿಕೆ ಪಡೆದವರು ಸರ್ಕಾರಿ ಕಚೇರಿಗಳು, ಮಾಲ್, ಚಿತ್ರಮಂದಿರ, ಹೊಟೇಲ್, ಪಬ್, ಕ್ಲಬ್ ಮುಂತಾದೆಡೆ ಬಳಸಲು ‘ಗ್ರೀನ್ ಪಾಸ್’ ಅಥವಾ ‘ಯೂನಿವರ್ಸಲ್ ಪಾಸ್’ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಈ ಬಗ್ಗೆ ಕೋವಿಡ್ ತಾಂತ್ರಿಕ ಸಮಿತಿ ಮತ್ತು ಐಟಿ ಕಂಪನಿಗಳ ಜತೆ ಸಮಾಲೋಚನೆ ನಡೆಸಲಾಗುತ್ತಿದೆ. ಇದರಿಂದ ಕೋವಿಡ್ ನಿಯಂತ್ರಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಹೊರ ರಾಜ್ಯಗಳಿಂದ ರೈಲುಗಳಲ್ಲಿ ಬರುವ ಪ್ರಯಾಣಿಕರು ಕೋವಿಡ್ ಪರೀಕ್ಷೆ ಮಾಡಿಸಿ ನೆಗೆಟಿವ್ ವರದಿ ಕಡ್ಡಾಯವಾಗಿ ತರುವ ಬಗ್ಗೆ ಆದೇಶ ಹೊರಡಿಸಲು ರೈಲ್ವೆ ಸಚಿವರಿಗೆ ಪತ್ರ ಬರೆಯಲು ನಿರ್ಧರಿಸಲಾಗಿದೆ ಎಂದರು.

ರಾಜ್ಯದಲ್ಲಿ ಲಾಕ್ಡೌನ್ ಜಾರಿ ಮಾಡುವುದಿಲ್ಲ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಕೋವಿಡ್ ಕುರಿತು ಸಾಮಾಜಿಕ ಜಾಲತಾಣ ಮತ್ತಿತರ ಮಾಧ್ಯಮಗಳ ಮೂಲಕ ತಪ್ಪು ಸಂದೇಶಗಳನ್ನು ಹರಿಬಿಟ್ಟರೆ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು ಎಂದೂ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.