ನವದೆಹಲಿಯಲ್ಲಿ ಮಂಗಳವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ವಾದ ಮಂಡಿಸಿದ ತಮಿಳುನಾಡು ಸರ್ಕಾರದ ಪ್ರತಿನಿಧಿಗಳು, ಕಾವೇರಿ ನ್ಯಾಯಮಂಡಳಿ 1992ರಲ್ಲಿ ನೀಡಿರುವ ಆದೇಶದ ಪ್ರಕಾರ, ಒಂದು ವಾರದಲ್ಲಿ ಹರಿಸಬೇಕಾದ ನೀರಿನ ಪ್ರಮಾಣದಲ್ಲಿ ಕೊರತೆ ಉಂಟಾದಲ್ಲಿ, ಅದನ್ನು ಮುಂಬರುವ ವಾರಗಳಲ್ಲಿ ಹರಿಸತಕ್ಕದ್ದು. ಹಾಗಾಗಿ, ಕರ್ನಾಟಕ ರಾಜ್ಯವು ತನ್ನ ಜಲಾಶಯಗಳು ಭರ್ತಿ ಆಗುವ ತನಕ ಹೆಚ್ಚುವರಿ ನೀರನ್ನು ಹರಿಸಲು ಕಾಯುವ ಹಾಗಿಲ್ಲ’ ಎಂದರು.