ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಣಿಪ್ಪಾಡಿ ವರದಿ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ: ರಾಜ್ಯ ಸರ್ಕಾರ

Last Updated 20 ಅಕ್ಟೋಬರ್ 2022, 20:09 IST
ಅಕ್ಷರ ಗಾತ್ರ

ಬೆಂಗಳೂರು: ‘ವಕ್ಫ್ ಸ್ಥಿರಾಸ್ತಿ ಕಬಳಿಕೆಗೆ ಸಂಬಂಧಿಸಿದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ 2022ರ ಸೆಪ್ಟೆಂಬರ್ 21ರಂದೇ ಮಂಡಿಸಲಾಗಿದೆ. ಆದರೆ, ಈ ಕುರಿತು ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಸಂಬಂಧ ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲೆ ಪ್ರತಿಮಾ ಹೊನ್ನಾಪುರ, ‘ವರದಿಯನ್ನು ಉಭಯ ಸದನಗಳಲ್ಲಿ ಈಗಾಗಲೇ ಮಂಡಿಸಲಾಗಿದೆ.

ಸರ್ಕಾರ ತೀರ್ಮಾನ ಕೈಗೊಂಡ ನಂತರ ಆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು. ಅದಕ್ಕಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದಪೀಠ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT