ಮೈಸೂರು: ‘ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಲೆ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ ಸರ್ಕಾರವು ತಾನು ಮಾಡಿರುವ ಬೆಲೆ ಏರಿಕೆ ಸಮರ್ಥನೆಗೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯನ್ನು ಬಳಸಬಾರದು. ಪುಣ್ಯಾತ್ಮ ಮೋದಿ ಅವರು ಗ್ಯಾಸ್ ಸಿಲಿಂಡರ್ ಅನ್ನು ₹ 300 ಕಡಿಮೆ ಮಾಡಿ, ಈಗ ₹50 ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಯಾವ ಅನ್ಯಾಯವನ್ನೂ ಮಾಡಿಲ್ಲ’ ಎಂದರು.

‘ಮೋದಿ ಅಧಿಕಾರಕ್ಕೆ ಬರುವ ಮುನ್ನ ರಾಜ್ಯಕ್ಕೆ ಶೇ 31ರಷ್ಟು ತೆರಿಗೆ ಪಾಲು ಸಿಗುತ್ತಿತ್ತು. ಈಗ ಶೇ 42ರಷ್ಟು ಬರುತ್ತಿದೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯಕ್ಕೆ 10 ವರ್ಷದಲ್ಲಿ ₹ 81,791 ಕೋಟಿ ಸಿಕ್ಕಿದ್ದರೆ, ಮೋದಿ ಸರ್ಕಾರ ಇದಕ್ಕೂ ಹೆಚ್ಚಿನ ಪಾಲನ್ನು ಕೊಟ್ಟಿದೆ’ ಎಂದರು.

‘ಸಿದ್ದರಾಮಯ್ಯ ಅವರಿಗೆ ಜಾಣ ಮರೆವಿದೆ. ಗೋಬೆಲ್ಸ್ ಸಿದ್ಧಾಂತದ ಮೇಲೆ ಅವರಿಗೆ ನಂಬಿಕೆ. ಸುಳ್ಳನ್ನೇ ಸಾವಿರ ಬಾರಿ ಹೇಳಿ ಸತ್ಯ ಮಾಡುವುದನ್ನು ಗೋಬೆಲ್ಸ್ ನೋಡಿದ್ದರೆ, ಸಿದ್ದರಾಮಯ್ಯ ತನ್ನ ಪ್ರೀತಿಯ ಶಿಷ್ಯ ಎನ್ನುತ್ತಿದ್ದರು’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.