ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಬದಲಿಸಿ ಹೊಸ CM ಆಗುವ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ:ಯತ್ನಾಳ

Published : 1 ಸೆಪ್ಟೆಂಬರ್ 2024, 15:28 IST
Last Updated : 1 ಸೆಪ್ಟೆಂಬರ್ 2024, 15:28 IST
ಫಾಲೋ ಮಾಡಿ
Comments

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನೇ ದಿನೇ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯಂಗ್ಯವಾಡಿದ್ದಾರೆ.

ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಈಗ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಆಗುವ ಆಕಾಂಕ್ಷಿಗಳ ಪಟ್ಟಿ ಸೇರ್ಪಡೆಯಾಗಿದ್ದಾರೆ ಎಂದು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ರಾಜ್ಯದ ಅಭಿವೃದ್ಧಿಗೆ ದುಡಿಯುವುದಕ್ಕಿಂತ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವವರೇ ಹೆಚ್ಚಾಗಿದ್ದಾರೆ. ಆಡಳಿತ, ಕಾನೂನು ಸುವ್ಯವಸ್ಥೆ ನಿಷ್ಕ್ರಿಯವಾಗಿದೆ. ಇದು ಈ ಸರ್ಕಾರದ ಕಥೆ, ವ್ಯಥೆ’ ಎಂದು ಯತ್ನಾಳ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್‌ ನಾಯಕ ಆರ್.ವಿ.ದೇಶಪಾಂಡೆ, ‘ಹೈಕಮಾಂಡ್ ಒಪ್ಪಿದರೆ ಹಾಗೂ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ, ಈಗ ಆ ಸ್ಥಾನದ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದು ಹೇಳಿದ್ದರು.

‘ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ದೊಡ್ಡವನು. ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕಷ್ಟೆ. ಎಲ್ಲರಂತೆಯೇ ನನಗೂ ಆಸೆ ಇದೆ; ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು. ಸದ್ಯ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಗೊತ್ತಿಲ್ಲದೆ ಅಂಥ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಸತೀಶ ಜಾರಕಿಹೊಳಿ ನಡೆಸಿರುವ ಸಭೆ ಇಲಾಖೆಗಳಿಗೆ ಸಂಬಂಧಪಟ್ಟಿದ್ದಷ್ಟೆ. ಸಿದ್ದರಾಮಯ್ಯ ಅವಧಿ ಪೂರೈಸುತ್ತಾರೆ’ ಎಂದು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT