ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Politics | 65 ಕೇಸ್‌ಗಳಿರುವ ಸಿದ್ದರಾಮಯ್ಯ ‘ಶುದ್ಧ’ರೇ?: ಆರ್‌.ಅಶೋಕ

Published 18 ಆಗಸ್ಟ್ 2024, 15:46 IST
Last Updated 18 ಆಗಸ್ಟ್ 2024, 15:46 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ  ಒಟ್ಟು 65 ಕೇಸುಗಳಿದ್ದು, ಅದನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹೀಗಾಗಿ ಅವರು ತಮ್ಮನ್ನು ತಾವು ‘ಕ್ಲೀನ್’ ಎಂದು ಹೇಗೆ ಕರೆದುಕೊಳ್ಳುತ್ತಾರೆ’ ಎಂದು ವಿರೋಧಪಕ್ಷದ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗ ರಾಜ್ಯಪಾಲರು ಅಕ್ರಮದ ಬಗ್ಗೆ ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್‌ ಸ್ವಾಗತ ಮಾಡಬೇಕಿತ್ತು. ತನಿಖೆಯಾಗಿ ಸ್ವಚ್ಛವಾಗಿ ಅವರು ಹೊರಬಂದರೆ ‘ಕ್ಲೀನ್‌’ ಎಂಬುದನ್ನು ನಂಬಬಹುದು’ ಎಂದು ಹೇಳಿದರು.

‘ರಾಜ್ಯದ ಕಾಂಗ್ರೆಸ್ ಸರ್ಕಾರ, ದೆಹಲಿ ಹೈಕಮಾಂಡ್‌ಗೆ ಎಟಿಎಂ ಆಗಿದೆ. ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಎಲ್‌.ಕೆ.ಅಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ನೀಡಿದ್ದರು. ಆದರೆ, ಈ ಪರಂಪರೆ ಕಾಂಗ್ರೆಸ್‌ಗೆ ಇಲ್ಲ. ಕಾಂಗ್ರೆಸ್‌ನ ಹಲವು ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ’ ಎಂದರು.

‘ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರವೇ ಇದೆ. ಯಾವುದೇ ಪ್ರಕರಣದ ಕುರಿತು ತನಿಖೆ ಬೇಕಾದರೂ ಮಾಡಲಿ. ಮುಡಾ ಹಗರಣದಲ್ಲಿ ನಾನು ಯಾವುದಕ್ಕೂ ಸಹಿ ಹಾಕಿಲ್ಲ. ದಾಖಲೆ ನೋಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರೇ ₹62 ಕೋಟಿ ಕೊಡಿ ಎಂದು ಹೇಳಿರುವಾಗ ಅದಕ್ಕಿಂತ ದೊಡ್ಡ ಸಾಕ್ಷಿ ಬೇಕಾ? ಸಿದ್ದರಾಮಯ್ಯ ಕಾನೂನಿಗೆ ತಲೆ ಬಾಗಬೇಕು. ಯಡಿಯೂರಪ್ಪ ಪ್ರಕರಣವೇ ಬೇರೆ, ಸಿದ್ದರಾಮಯ್ಯ ಪ್ರಕರಣವೇ ಬೇರೆ ಎಂದು ಕಾಂಗ್ರೆಸ್‌ ನಾಯಕರು ಸಮರ್ಥನೆ ಮಾಡಿಕೊಳ್ಳುತ್ತಿರುವುದು ಬಾಲಿಶವಾಗಿದೆ’ ಎಂದರು.

ಈ ಮಧ್ಯೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT