ಹಾನಗಲ್: ಕರ್ನಾಟಕದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ 2025-26 ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ನೀಡಬೇಕಿದ್ದ ₹15,583 ಕೋಟಿ ನೀಡದೇ ಕನ್ನಡಿಗರನ್ನು ಮಲತಾಯಿ ಮಕ್ಕಳಂತೆ ನೋಡುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ಹಿರೇಬಾಸೂರು ಗ್ರಾಮದಲ್ಲಿ ಬುಧವಾರ ₹65 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಹಾನಗಲ್ ತಾಲ್ಲೂಕಿನ 42 ಗ್ರಾಮ ಪಂಚಾಯಿತಿಗಳಿಗೆ ಒಟ್ಟು ₹15.5 ಕೋಟಿ, ಹಾನಗಲ್ ಪುರಸಭೆಗೆ ₹1.19 ಕೋಟಿ ಬಿಡುಗಡೆಯಾಗಬೇಕಿತ್ತು ಎಂದರು. 2025-26ನೇ ಸಾಲಿನ ಆರ್ಥಿಕ ವರ್ಷ ಪೂರ್ಣಗೊಂಡರೂ, ಬಿಡಿಗಾಸು ಅನುದಾನ ಸಹ ಬಿಡುಗಡೆಯಾಗಿಲ್ಲ. ಕುಡಿಯುವ ನೀರು ಪೂರೈಕೆ, ನೈರ್ಮಲ್ಯ, ಬೀದಿದೀಪ ನಿರ್ವಹಣೆ ಸೇರಿದಂತೆ ಇತರ ಕೆಲಸ, ಕಾರ್ಯಗಳಿಗೆ ಬಳಕೆಯಾಗಬೇಕಿದ್ದ ಅನುದಾನ ಬಾರದೇ ಸ್ಥಳೀಯ ಸಂಸ್ಥೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದರು.

ನ್ಯಾಯಯುತವಾಗಿ ಸಿಗಬೇಕಿದ್ದ ಅನುದಾನದ ಬಗ್ಗೆ ಪ್ರಶ್ನಿಸಿದರೆ ಕೇಂದ್ರ ಸರ್ಕಾರ ಇಲ್ಲಸಲ್ಲದ ಸಂಗತಿಗಳನ್ನು ಎಳೆದು ತರುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರೂ ಕೂಡ ಈ ಕುರಿತು ಪ್ರಶ್ನಿಸಿದರೆ ಎಲ್ಲಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆಯೋ ಎನ್ನುವ ಆತಂಕದಲ್ಲಿ ಇದ್ದಂತಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಕೆಪಿಸಿಸಿ ಸದಸ್ಯ ಟಾಕನಗೌಡ ಪಾಟೀಲ, ಮುಖಂಡರಾದ ದಾವಲಸಾಬ ನಾಗನೂರ, ಶಂಕ್ರಪ್ಪ ತೋಟಗೇರ, ಸಿದ್ದಪ್ಪ ಬ್ಯಾತನಾಳ, ಪರಶುರಾಮ ಜಾಡರ, ಗುಡ್ಡಪ್ಪ ತೋಟಗೇರ, ಸುರೇಶ ಹರಿಜನ, ಉಮೇಶ ಭಜಂತ್ರಿ, ಮರ್ದಾನ್ ಅಂಗಡಿ, ಪ್ರವೀಣ ಹರಿಜ, ಶಿವರಾಜ್ ದೇಸಾಯಿ, ಮರ್ದಾನ್ ತಹಶೀಲ್ದಾರ್, ಮುಕ್ತಾರ್ ಬಾಸೂರ, ಧರ್ಮಣ್ಣ ತೋಟಗೇರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-22-1398358381

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.