ನವದೆಹಲಿ: ‘ಅಂತರ್ಜಲದಲ್ಲಿ ಆರ್ಸೆನಿಕ್ ಮತ್ತು ಫ್ಲೋರೈಡ್ನಂತಹ ವಿಷಕಾರಿ ಅಂಶಗಳ ಉಪಸ್ಥಿತಿ ಹೆಚ್ಚಾಗುತ್ತಿದೆ. ಕರ್ನಾಟಕದ 20 ಗ್ರಾಮಗಳಲ್ಲಿ ಆರ್ಸೆನಿಕ್ ಹಾಗೂ 2,083 ಹಳ್ಳಿಗಳಲ್ಲಿ ಫ್ಲೋರೈಡ್ ಪ್ರಮಾಣ ಕಂಡುಬಂದಿದೆ’ ಎಂದು ಕೇಂದ್ರ ಅಂತರ್ಜಲ ಮಂಡಳಿ ತಿಳಿಸಿದೆ.

25 ರಾಜ್ಯಗಳ 230 ಜಿಲ್ಲೆಗಳ ಅಂತರ್ಜಲದಲ್ಲಿ ಆರ್ಸೆನಿಕ್ ಮತ್ತು 27 ರಾಜ್ಯಗಳ 469 ಜಿಲ್ಲೆಗಳಲ್ಲಿ ಫ್ಲೋರೈಡ್ ಪತ್ತೆಯಾಗಿದೆ ಎಂದು ಮಾಧ್ಯಮದಲ್ಲಿ ವರದಿ ಪತ್ತೆಯಾಗಿತ್ತು. ವರದಿಯನ್ನು ಗಂಭೀರವಾಗಿ ಪರಿಗಣಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್ಜಿಟಿ) ಪ್ರಧಾನ ಪೀಠವು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು.

ನ್ಯಾಯಮಂಡಳಿಯು ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತ್ತು. ‘ಈ ದಯನೀಯ ಪರಿಸ್ಥಿತಿ ಕುರಿತು ರಾಜ್ಯಗಳು ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ದುರ್ದಿನ ಎದುರಿಸಬೇಕಾಗುತ್ತದೆ’ ಎಂದು ಚಾಟಿ ಬೀಸಿತ್ತು.

‘ರಾಜ್ಯದಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಅಂಶ ಇರುವ ಜಿಲ್ಲೆಗಳು ಯಾವುವು, ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳೇನು’ ಎಂಬುದರ ಬಗ್ಗೆ ರಾಜ್ಯ ಸರ್ಕಾರಗಳು ವರದಿ ಸಲ್ಲಿಸಿದ್ದವು. ರಾಜ್ಯ ಸರ್ಕಾರಗಳ ದತ್ತಾಂಶಗಳನ್ನು ವಿಶ್ಲೇಷಣೆ ನಡೆಸಿ ಕೇಂದ್ರ ಅಂತರ್ಜಲ ಮಂಡಳಿಯು ಎನ್ಜಿಟಿಗೆ ಸಮಗ್ರ ವರದಿ ಸಲ್ಲಿಸಿದೆ. ಆರ್ಸೆನಿಕ್ ಹಾಗೂ ಫ್ಲೋರೈಡ್ ಮಾಲಿನ್ಯ ಕಡಿಮೆ ಮಾಡಲು ರಾಜ್ಯ ಸರ್ಕಾರಗಳು ಹಲವು ಉಪಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಂಡಳಿ ಶಿಫಾರಸು ಮಾಡಿದೆ.

ಇನ್ನೊಂದೆಡೆ, ಆರ್ಸೆನಿಕ್ ಪೀಡಿತ 20 ಗ್ರಾಮಗಳಲ್ಲಿ ಪರ್ಯಾಯ ಮೂಲಗಳ ಮೂಲಕ ಅಂದರೆ ಬಹು ಗ್ರಾಮ ಕುಡಿಯುವ ಯೋಜನೆ ಮೂಲಕ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರವು ಎನ್ಜಿಟಿಗೆ ವರದಿ ಸಲ್ಲಿಸಿದೆ. ‘ಫ್ಲೋರೈಡ್ ಸಮಸ್ಯೆ ಕಂಡು ಬಂದಿರುವ 144 ಹಳ್ಳಿಗಳಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. 303 ಹಳ್ಳಿಗಳಿಗೆ ಪರ್ಯಾಯ ಕೊಳವೆಬಾವಿಗಳ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲಾಗುತ್ತಿದೆ. 1,636 ಹಳ್ಳಿಗಳಿಗೆ ಆರ್ಒ ಘಟಕಗಳ ಮೂಲಕ ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ‘ ಎಂದು ಸರ್ಕಾರ ಹೇಳಿದೆ.

ಇದೇ 17ರಂದು ಸ್ವಯಂಪ್ರೇರಿತ ಪ್ರಕರಣ ವಿಲೇವಾರಿ ಮಾಡಿರುವ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ತ್ರಿಸದಸ್ಯ ಪೀಠವು, ಕೇಂದ್ರ ಅಂರ್ಜಲ ಮಂಡಳಿಯ ಶಿಫಾರಸುಗಳನ್ನು ಎಲ್ಲ ರಾಜ್ಯಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದೆ. ಶಿಫಾರಸಿನ ಪರಿಣಾಮಕಾರಿ ಅನುಷ್ಠಾನ ಖಚಿತಪಡಿಸಿಕೊಳ್ಳಲು ಕೇಂದ್ರ ಅಂತರ್ಜಲ ಮಂಡಳಿಯು ರಾಜ್ಯಗಳ ಮೇಲೆ ನಿಗಾ ವಹಿಸಿ ನಿಯಮಿತ ಮೇಲ್ವಿಚಾರಣೆ ಮಾಡಬೇಕು ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.