ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಗ್ಯಾರಂಟಿ’ ಯೋಜನೆಗಳ ಮರುಪರಿಶೀಲನೆ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಕುರಿತು ಚರ್ಚಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪಬೇಕು ಎನ್ನುವುದು ಸರ್ಕಾರದ ಧ್ಯೇಯ. ಕೆಲ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು ₹100 ಕೋಟಿಯಷ್ಟು ಬೇರೆಯವರ ಖಾತೆಗಳಿಗೆ ಹೋಗಿ ದುರ್ಬಳಕೆಯಾಗಿದೆ. ಕೆಲವರು ಬೇರೆಯವರ ಮೊಬೈಲ್ ಸಂಖ್ಯೆ ನೀಡಿದ್ದಾರೆ. ಅಂಥವರ ಖಾತೆಗೆ ಹಣ ಜಮೆಯಾಗಿಲ್ಲ ಎನ್ನುವ ದೂರುಗಳಿವೆ. ಸರಿಯಾದ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ, ಇಲ್ಲವೇ ಎಂದು ತಿಳಿಯಬೇಕಿದೆ. ಇಂತಹ ಎಲ್ಲ ಸಮಸ್ಯೆಗಳನ್ನು ಸರಿಪಡಿಸಲು ಫಲಾನುಭವಿಗಳ ನಿಖರ ದಾಖಲೆ ಸಂಗ್ರಹಿಸಲಾಗುವುದು’ ಎಂದರು.

‘ಕೇಂದ್ರ ಸರ್ಕಾರ ಅಕ್ಕಿ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ತಿಂಗಳಿನಿಂದ ಅನ್ನಭಾಗ್ಯದ ಅಕ್ಕಿ ಸರಿಯಾಗಿ ವಿತರಣೆ ಆಗುತ್ತಿಲ್ಲ. ಕೇವಲ ಕರ್ನಾಟಕ ಮಾತ್ರವಲ್ಲ, ಎನ್ಡಿಎ ಹೊರತಾದ ಪಕ್ಷಗಳ ಆಡಳಿತ ಇರುವ ಎಲ್ಲ ರಾಜ್ಯಗಳಲ್ಲೂ ಈ ರೀತಿ ಮಾಡುತ್ತಿದ್ದಾರೆ’ ಎಂದು ದೂರಿದರು

‘ಹಣದುಬ್ಬರದ ನಡುವೆಯೂ ಗ್ಯಾರಂಟಿ ಯೋಜನೆಗಳು ಜನರಿಗೆ ಆಸರೆಯಾಗಿವೆ. ಬಿಜೆಪಿ ಜಾತಿ, ಧರ್ಮದ ವಿಚಾರವಾಗಿ ಭಾವನೆ ಮೇಲೆ ರಾಜಕಾರಣ ಮಾಡಿದರೆ, ಕಾಂಗ್ರೆಸ್ ಜನರ ಬದುಕಿನ ಮೇಲೆ ರಾಜಕೀಯ ಮಾಡುತ್ತಿದೆ. ಜನರ ಬೆವರು, ಪರಿಶ್ರಮಕ್ಕೆ ಬೆಲೆ ನೀಡಿ, ಗ್ಯಾರಂಟಿ ಯೋಜನೆಗಳ ಮೂಲಕ ಅವರ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-51-436859467

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.