ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಪ್ರಾಥಮಿಕ ಶಾಲೆಗಳಿಗೆ 40 ಸಾವಿರ ಮತ್ತು ಪ್ರೌಢ ಶಾಲೆಗಳಿಗೆ 11 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ತಕ್ಷಣ ಪ್ರಕ್ರಿಯೆ ಆರಂಭಿಸಬೇಕು. ಶಾಲಾ ಆರಂಭದ ವೇಳೆಗೆ ನೇಮಕಾತಿ ಪೂರ್ಣಗೊಳಿಸಬೇಕು. ಖಾಲಿ ಇರುವ ಹುದ್ದೆಗಳಿಗೆ ಕಾಯಂ ಶಿಕ್ಷಕರು ನೇಮಕ ಆಗುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ವರ್ಷದ (2026-27) ಅಂತ್ಯದವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ರಾಜ್ಯದ ಸರ್ಕಾರಿ ಶಾಲೆಗಳು ಜೂನ್ 1ರಿಂದ ಆರಂಭವಾಗುತ್ತಿದ್ದು, ಬೋಧನಾ ಕಾರ್ಯಗಳು ಸುಗಮವಾಗಿ ನಡೆಯಲು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಖಾತ್ರಿಪಡಿಸಲು ಅತಿಥಿ ಶಿಕ್ಷಕರ ಲಭ್ಯತೆ ಸಹಕಾರಿಯಾಗಲಿದೆ ಎಂದು ಇಲಾಖೆ ಹೇಳಿದೆ.

ಪಿಯು ಕಾಲೇಜುಗಳಿಗೆ 6,086 ‘ಅತಿಥಿ’ಗಳು: ಪದವಿಪೂರ್ವ ಕಾಲೇಜುಗಳಿಗೆ 6,086 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಪದವಿಪೂರ್ವ ಶಿಕ್ಷಣ ನಿರ್ದೇಶನಾಲಯ ಅನುಮತಿ ನೀಡಿದೆ. ಅತಿಥಿ ಉಪನ್ಯಾಸಕರ ವೇತನ ವೆಚ್ಚವಾಗಿ ₹ 85.20 ಕೋಟಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.