ವಿಚಾರಣೆ ವೇಳೆ ಹಿರಿಯ ವಕೀಲರೂ ಆದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ರವಿವರ್ಮ ಕುಮಾರ್, 'ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012) ಕಲಂ 35ರ ಪ್ರಕಾರ ಅಪರಾಧದ ಆರೋಪವನ್ನು ಪರಿಗಣಿಸಿದ ನಂತರ ಒಂದು ತಿಂಗಳ ಅವಧಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಆದ್ದರಿಂದ, ಈ ಹಿಂದೆ ನೀಡಿರುವ ತಡೆ ಆದೇಶ ತೆರವುಗೊಳಿಸಬೇಕು’ ಎಂದು ಮನವಿ ಮಾಡಿದರು.