ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್ ಈ ಸಂಬಂಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.

‘ಎನ್ಇಪಿ ಜಾರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಹೈಕೋರ್ಟ್ ವಕೀಲ ಗಿರೀಶ್ ಭಾರದ್ವಾಜ್ ಹಾಗೂ ಆರ್.ಆನಂದ ಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಸರ್ಕಾರದ ನೀತಿ ನಿರೂಪಣೆ ವಿಚಾರದಲ್ಲಿ ಅನಗತ್ಯವಾಗಿ ಮಧ್ಯಪ್ರವೇಶ ಮಾಡುವುದಿಲ್ಲ. ಅರ್ಜಿದಾರರ ಮೂಲಭೂತ ಹಕ್ಕು ಅಥವಾ ಶಾಸನಬದ್ಧ ಹಕ್ಕು ಉಲ್ಲಂಘನೆಯಾಗಿದೆ ಎಂಬುದನ್ನು ತೋರಿಸದ ಹೊರತು ನ್ಯಾಯಾಲಯ ಸಂವಿಧಾನದ 226ನೇ ವಿಧಿಯಡಿ ತನ್ನ ಹಕ್ಕು ಚಲಾಯಿಸಲಾಗದು’ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.